1. {#1ಕಳೆದುಹೋದ ಕುರಿಯ ಸಾಮ್ಯ [BR]ಮತ್ತಾ 18:12-14 } [PS]ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.
2. ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. [PE]
3. [PS]ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
4. ಅದೇನೆಂದರೆ, [SCJ]“ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?[SCJ.]
5. [SCJ]ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,[SCJ.]
6. [SCJ]ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.[SCJ.]
7. [SCJ]ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.[SCJ.] [PE]
8. {#1ಕಳೆದುಹೋದ ನಾಣ್ಯದ ಸಾಮ್ಯ } [PS] [SCJ]“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?[SCJ.]
9. [SCJ]ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.[SCJ.]
10. [SCJ]ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ”[SCJ.] ಅಂದನು. [PE]
11. {#1ದುಂದುಗಾರ ಮಗ } [PS]ಇನ್ನೂ ಆತನು ಹೇಳಿದ್ದೇನಂದರೆ, [SCJ]“ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.[SCJ.]
12. [SCJ]ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.[SCJ.]
13. [SCJ]ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.[SCJ.]
14. [SCJ]ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.[SCJ.]
15. [SCJ]ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.[SCJ.]
16. [SCJ]ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.[SCJ.]
17. [SCJ]ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.[SCJ.]
18. [SCJ]ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.[SCJ.]
19. [SCJ]ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,[SCJ.]
20. [SCJ]ಎದ್ದು ತನ್ನ ತಂದೆಯ ಕಡೆಗೆ ಬಂದನು.[SCJ.] [PE][PS][SCJ]“ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.[SCJ.]
21. [SCJ]ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,[SCJ.]
22. [SCJ]ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,[SCJ.]
23. [SCJ]ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.[SCJ.]
24. [SCJ]ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.[SCJ.]
25. [SCJ]ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,[SCJ.]
26. [SCJ]ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.[SCJ.]
27. [SCJ]ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.[SCJ.]
28. [SCJ]ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.[SCJ.]
29. [SCJ]ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.[SCJ.]
30. [SCJ]ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.[SCJ.]
31. [SCJ]ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ.[SCJ.]
32. [SCJ]ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’ ” ಎಂದು ಹೇಳಿದನು.[SCJ.] [PE]