1. {ಕಳೆದುಹೋದ ಕುರಿಯ ಸಾಮ್ಯ} (ಮತ್ತಾ 18:12-14) PS ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.
|
2. ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. PEPS
|
4. ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
|
6. ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.
|
7. ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. PS
|
8. {ಕಳೆದುಹೋದ ನಾಣ್ಯದ ಸಾಮ್ಯ} PS “ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?
|
9. ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
|
10. ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು. PS
|
12. ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.
|
13. ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.
|
15. ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.
|
16. ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ.
|
17. ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.
|
18. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
|
19. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,
|
20. ಎದ್ದು ತನ್ನ ತಂದೆಯ ಕಡೆಗೆ ಬಂದನು. PEPS “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
|
21. ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,
|
22. ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,
|
24. ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
|
25. ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
|
27. ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.
|
28. ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.
|
29. ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.
|
30. ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.
|
32. ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’ ” ಎಂದು ಹೇಳಿದನು. PE
|