1. {#1ಅಪ್ರಾಮಾಣಿಕನಾದ ಪಾರುಪಾತ್ಯಗಾರನ ಸಾಮ್ಯ } [PS]ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, [SCJ]“ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,[SCJ.]
2. [SCJ]ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.[SCJ.]
3. [SCJ]ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.[SCJ.]
4. [SCJ]ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,[SCJ.]
5. [SCJ]ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,[SCJ.]
6. [SCJ]ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.[SCJ.]
7. [SCJ]ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.[SCJ.]
8. [SCJ]ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.[SCJ.] [PE]
9. [PS] [SCJ]“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.[SCJ.]
10. [SCJ]ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.[SCJ.]
11. [SCJ]ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?[SCJ.]
12. [SCJ]ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?[SCJ.]
13. [SCJ]ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ”[SCJ.] ಅಂದನು. [PE]
14. {#1ಯೇಸು ನುಡಿದ ನಾನಾ ವಚನಗಳು [BR]ಮತ್ತಾ 11:12,13; 5:31,32; ಮಾರ್ಕ 10:11,12 } [PS]ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
15. ಆಗ ಆತನು ಅವರಿಗೆ ಹೇಳಿದ್ದೇನಂದರೆ, [SCJ]“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.[SCJ.] [PE]
16. [PS] [SCJ]“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.[SCJ.]
17. [SCJ]ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.[SCJ.] [PE]
18.
19. [PS] [SCJ]“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.[SCJ.] [PE]{#1ಐಶ್ವರ್ಯವಂತನೂ ಲಾಜರನೂ } [PS] [SCJ]“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.[SCJ.]
20. [SCJ]ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.[SCJ.]
21. [SCJ]ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.[SCJ.]
22. [SCJ]ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.[SCJ.]
23. [SCJ]ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,[SCJ.]
24. [SCJ]‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.[SCJ.]
25. [SCJ]ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.[SCJ.]
26. [SCJ]ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.[SCJ.]
27. [SCJ]ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.[SCJ.]
28. [SCJ]ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.[SCJ.]
29. [SCJ]ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,[SCJ.]
30. [SCJ]ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.[SCJ.]
31. [SCJ]ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”[SCJ.] [PE]