1. {ಯೇಸುವಿನ ನಾನಾ ವಚನಗಳು} PS ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
|
2. ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
|
3. ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
|
4. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು. PS
|
6. ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು. PS
|
7. {ಆಳಿನ ಕರ್ತವ್ಯ} PS “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
|
8. ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
|
10. ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು. PS
|
11. {ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದ್ದು} PS ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
|
14. ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
|
19. ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು. ಮತ್ತಾ 24:23-28,37-41 PEPS
|
20. {ದೇವರ ರಾಜ್ಯದ ಆಗಮನ} PS ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
|
21. ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು. PEPS
|
22. ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
|
23. ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
|
24. ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
|
27. ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
|
28. ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
|
29. ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
|
31. ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
|
33. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
|
34. ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
|
35. ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
|
36. * ಕೆಲವು ಪ್ರತಿಗಳಲ್ಲಿ ಈ ವಚನವಿಲ್ಲ. “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
|
37. ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು. PE
|