1. {ವಿಧವೆಯ ಹಾಗೂ ನ್ಯಾಯಾಧಿಪತಿಯ ಸಾಮ್ಯ} PS ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
|
2. ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
|
3. ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
|
4. ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
|
5. ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
|
7. ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
|
8. ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು. PS
|
9. {ಫರಿಸಾಯನ ಹಾಗೂ ಸುಂಕದವನ ಪ್ರಾರ್ಥನೆ} PS ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
|
10. ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
|
11. ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
|
12. ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
|
13. ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
|
14. ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು. PS
|
15. {ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು} (ಮತ್ತಾ 19:13-15; ಮಾರ್ಕ 10:13-16) PS ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
|
16. ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
|
17. ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು. PS
|
18. {ಐಶ್ವರ್ಯವಂತನಾದ ಅಧಿಕಾರಿ} (ಮತ್ತಾ 19:16-29; ಮಾರ್ಕ 10:17-30) PS ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,
|
20. ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
|
22. ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
|
29. ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
|
30. ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. PS
|
31. {ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು} (ಮತ್ತಾ 20:17-19; ಮಾರ್ಕ 10:32-34) PS ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
|
33. ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. PEPS
|
34. ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ. PS
|
35. {ಯೇಸು ಒಬ್ಬ ಕುರುಡ ಭಿಕ್ಷುಕನನ್ನು ಸ್ವಸ್ಥಮಾಡಿದ್ದು} (ಮತ್ತಾ 20:29-34; ಮಾರ್ಕ 10:46-52) PS ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
|
39. ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
|
41. ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
|
43. ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು. PE
|