1. {ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದ್ದು} (ಮತ್ತಾ 21:23-27; ಮಾರ್ಕ 11:27-33) PS ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
|
2. “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
|
4. ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು. PEPS
|
6. ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’ ” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
|
8. ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು. PS
|
9. {ದ್ರಾಕ್ಷಿಯ ತೋಟದ ಒಕ್ಕಲಿಗರ ಸಾಮ್ಯ} (ಮತ್ತಾ 21:33-46; ಮಾರ್ಕ 12:1-12) PS ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
|
10. ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
|
13. ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
|
14. ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
|
15. ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
|
16. ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು. PEPS
|
17. ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ
“ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು? PEPS |
18. “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು. PS
|
19. {ಸುಂಕದ ಕುರಿತು ವಿರೋಧಿಗಳ ಪ್ರಶ್ನೆ} (ಮತ್ತಾ 22:15-22; ಮಾರ್ಕ 12:13-17) PS ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
|
20. ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
|
21. ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
|
24. ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
|
26. ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು. PS
|
27. {ಪುನರುತ್ಥಾನದ ಕುರಿತು ಸದ್ದುಕಾಯರ ಪ್ರಶ್ನೆ} (ಮತ್ತಾ 22:23-33; ಮಾರ್ಕ 12:18-27) PS ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
|
28. “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
|
30. (30-31) ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
|
33. ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು. PEPS
|
35. ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.
|
36. ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
|
37. ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ * ವಿಮೋ 3:6 ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
|
38. ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು. PEPS
|
41. {ಕ್ರಿಸ್ತನ ಕುರಿತಾದ ಪ್ರಶ್ನೆ} (ಮತ್ತಾ 22:41-46; ಮಾರ್ಕ 12:35-37) PS ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
|
42. (42-43) † ನಾನು ನಿನ್ನ ವಿರೋಧಿಗಳನ್ನು ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. PEPS |
45. {ಶಾಸ್ತ್ರಿಗಳ ವಿಷಯದಲ್ಲಿ ಯೇಸು ಎಚ್ಚರಿಸಿದ್ದು} (ಮತ್ತಾ 23:1-36; ಮಾರ್ಕ 12:38-40) PS ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
|
46. “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
|
47. ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು. PE
|