1. {#1ವಿಧವೆಯ ಕಾಣಿಕೆ [BR]ಮಾರ್ಕ 12:41-44 } [PS]ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
2. ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
3. [SCJ]“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.[SCJ.]
4. [SCJ]ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು”[SCJ.] ಅಂದನು. [PE]
5. {#1ಯೇಸು ಯೆರೂಸಲೇಮಿನ ದೇವಾಲಯದ ನಾಶನದ ಬಗ್ಗೆ ಹೇಳಿದ್ದು [BR]ಮತ್ತಾ 24:1-14; ಮಾರ್ಕ 13:1-13 } [PS]ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,
6. ಯೇಸು, [SCJ]“ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು”[SCJ.] ಅಂದನು.
7. ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,
8. ಯೇಸು ಹೇಳಿದ್ದೇನಂದರೆ, [SCJ]“ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.[SCJ.]
9. [SCJ]ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ”[SCJ.] ಅಂದನು. [PE]
10. [PS]ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, [SCJ]“ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.[SCJ.]
11. [SCJ]ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.[SCJ.]
12. [SCJ]ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.[SCJ.]
13. [SCJ]ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.[SCJ.]
14. [SCJ]ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.[SCJ.]
15. [SCJ]ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.[SCJ.]
16. [SCJ]ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.[SCJ.]
17. [SCJ]ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.[SCJ.]
18. [SCJ]ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.[SCJ.]
19. [SCJ]ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.[SCJ.] [PE]
20. {#1ಯೆರೂಸಲೇಮಿನ ನಾಶನದ ಬಗ್ಗೆ ಯೇಸು ಹೇಳಿದ್ದು [BR]ಮತ್ತಾ 24:15-21; ಮಾರ್ಕ 13:14-19 } [PS] [SCJ]“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.[SCJ.]
21. [SCJ]ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.[SCJ.]
22. [SCJ]ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.[SCJ.]
23. [SCJ]ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.[SCJ.]
24. [SCJ]ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.[SCJ.] [PE]
25. {#1ಮನುಷ್ಯಕುಮಾರನು ಪುನರಾಗಮನ [BR]ಮತ್ತಾ 24:29-31; ಮಾರ್ಕ 13:24-27 } [PS] [SCJ]“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.[SCJ.]
26. [SCJ]ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.[SCJ.]
27. [SCJ]ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.[SCJ.]
28. [SCJ]ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ”[SCJ.] ಅಂದನು. [PE]
29. {#1ಅಂಜೂರ ಮರದ ಸಾಮ್ಯ [BR]ಮತ್ತಾ 24:32-35; ಮಾರ್ಕ 13:28-31 } [PS]ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, [SCJ]“ಅಂಜೂರ ಮುಂತಾದ ಮರಗಳನ್ನೂ ನೋಡಿರಿ.[SCJ.]
30. [SCJ]ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.[SCJ.]
31. [SCJ]ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.[SCJ.] [PE]
32. [PS] [SCJ]“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
33. [SCJ]ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.[SCJ.] [PE]
34. [PS] [SCJ]“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.[SCJ.]
35. [SCJ]ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.[SCJ.]
36. [SCJ]ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ”[SCJ.] ಅಂದನು. [PE]
37. {#1ಅಧಿಕಾರಿಗಳು ಯೇಸುವನ್ನು ಕೊಲ್ಲುವುದಕ್ಕೆ ಉಪಾಯಮಾಡಿದ್ದು } [PS]ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
38. ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. [PE]