1. {ವಿಧವೆಯ ಕಾಣಿಕೆ} (ಮಾರ್ಕ 12:41-44) PS ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
|
4. ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು. PS
|
5. {ಯೇಸು ಯೆರೂಸಲೇಮಿನ ದೇವಾಲಯದ ನಾಶನದ ಬಗ್ಗೆ ಹೇಳಿದ್ದು} (ಮತ್ತಾ 24:1-14; ಮಾರ್ಕ 13:1-13) PS ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,
|
6. ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
|
8. ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.
|
9. ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. PEPS
|
11. ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
|
12. ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
|
14. ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.
|
15. ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
|
16. ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.
|
20. {ಯೆರೂಸಲೇಮಿನ ನಾಶನದ ಬಗ್ಗೆ ಯೇಸು ಹೇಳಿದ್ದು} (ಮತ್ತಾ 24:15-21; ಮಾರ್ಕ 13:14-19) PS “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
|
21. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
|
23. ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
|
24. ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು. PS
|
25. {ಮನುಷ್ಯಕುಮಾರನು ಪುನರಾಗಮನ} (ಮತ್ತಾ 24:29-31; ಮಾರ್ಕ 13:24-27) PS “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
|
26. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
|
28. ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. PS
|
29. {ಅಂಜೂರ ಮರದ ಸಾಮ್ಯ} (ಮತ್ತಾ 24:32-35; ಮಾರ್ಕ 13:28-31) PS ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
|
34. “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
|
36. ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು. PS
|
37. {ಅಧಿಕಾರಿಗಳು ಯೇಸುವನ್ನು ಕೊಲ್ಲುವುದಕ್ಕೆ ಉಪಾಯಮಾಡಿದ್ದು} PS ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
|