2. ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು. ಮತ್ತಾ 26:14-16; ಮಾರ್ಕ 14:10,11 PEPS
|
3. {ಯೂದನ ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು} PS ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
|
4. ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
|
6. ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು. PS
|
7. {ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು} (ಮತ್ತಾ 26:17-30; ಮಾರ್ಕ 14:12-26; ಯೋಹಾ 13:21-30; 1ಕೊರಿ 11:23-25) PS ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,
|
8. ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
|
10. ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
|
11. ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
|
12. ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
|
15. ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
|
16. ಇನ್ನು ದೇವರ ರಾಜ್ಯದಲ್ಲಿ * ಲೂಕ 17:20-37 ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು. PEPS
|
17. ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.
|
18. ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು. PEPS
|
19. ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
|
20. ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. PEPS
|
22. ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು. PEPS
|
23. ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. PS
|
24. {ದೊಡ್ಡವನು ಯಾರು ಎಂಬ ಚರ್ಚೆ} PS ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
|
25. ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
|
27. ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
|
30. ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ. PS
|
31. {ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು} (ಮತ್ತಾ 26:31-35; ಮಾರ್ಕ 14:27-31; ಯೋಹಾ 13:36-38) PS “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.
|
32. ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
|
34. ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು. PEPS
|
35. ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ † ಹಣದ ಚೀಲ, ಹೆಗಲು ಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
|
36. ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
|
37. ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು. PEPS
|
39. {ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋಗಿ ಪ್ರಾರ್ಥಿಸಿದ್ದು} (ಮತ್ತಾ 26:36-46; ಮಾರ್ಕ 14:32-42) PS ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
|
42. “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
|
44. ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು. PEPS
|
45. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
|
47. {ಯೇಸುವಿನ ಬಂಧನ} (ಮತ್ತಾ 26:47-56; ಮಾರ್ಕ 14:43-50; ಯೋಹಾ 18:3-11) PS ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
|
49. ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
|
52. ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?
|
53. ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. ಮತ್ತಾ 26:57,58,69-75; ಮಾರ್ಕ 14:53,54,66-72; ಯೋಹಾ 18:12-18,25-27 PEPS
|
54. {ಪೇತ್ರನು ಯೇಸುವನ್ನು ನಿರಾಕರಿಸಿದ್ದು} PS ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
|
56. ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
|
58. ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು. PEPS
|
59. ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು. PEPS
|
61. ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
|
63. (63-64) ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
|
65. {ಯೇಸುವನ್ನು ಹಿರೀಸಭೆಯವರ ನಿಲ್ಲಿಸಿದ್ದು} (ಮತ್ತಾ 26:59-66; ಮಾರ್ಕ 14:55-64; ಯೋಹಾ 18:19-24) PS ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
|
69. ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
|