1. {ಪಿಲಾತನು ಯೇಸುವನ್ನು ವಿಚಾರಿಸಿ ಮರಣದಂಡನೆಯನ್ನು ವಿಧಿಸಿದ್ದು} PS ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
|
2. “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
|
5. ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.
|
7. ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
|
8. ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
|
11. ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
|
14. ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
|
15. ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
|
17. ( * ಕೆಲವು ಪ್ರತಿಗಳಲ್ಲಿ ಇದು ಕಂಡುಬರುವುದಿಲ್ಲ. ಮಾರ್ಕ 15:6 ರನ್ನು ನೋಡಿರಿ. ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)
|
19. ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು. PEPS
|
22. ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
|
23. ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.
|
25. ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು. PS
|
26. {ಯೇಸುವನ್ನು ಶಿಲುಬೆಗೆ ಹಾಕಿದ್ದು} (ಮತ್ತಾ 27:32-44; ಮಾರ್ಕ 15:21-32; ಯೋಹಾ 19:17-27) PS ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು. PEPS
|
27. ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.
|
28. ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
|
33. ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
|
34. ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು. PEPS
|
35. ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
|
39. ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
|
41. ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
|
43. ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು. PS
|
44. {ಯೇಸುವಿನ ಮರಣ} (ಮತ್ತಾ 27:45-56; ಮಾರ್ಕ 15:33-41; ಯೋಹಾ 19:28-30) PS (44-45) ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
|
46. ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. PEPS
|
47. ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
|
49. ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು. PS
|
50. {ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು} (ಮತ್ತಾ 27:57-61; ಮಾರ್ಕ 15:42-47; ಯೋಹಾ 19:38-42) PS (50-51) ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
|
53. ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.
|
54. ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು. PEPS
|
55. ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,
|
56. ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು. PE
|