1. {ಸ್ನಾನಿಕನಾದ ಯೋಹಾನನು} (ಮತ್ತಾ 3:1-12; ಲೂಕ 3:1-18; ಯೋಹಾ 1:19-28) PS * ಕೆಲವು ಪ್ರತಿಗಳಲ್ಲಿ ದೇವಕುಮಾರನಾದ ಎಂಬ ಪದವು ಇಲ್ಲ. ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು. PEPS
|
2. † ಮಲಾ. 3:1. ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ,
“ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” |
3. ‡ ಯೆಶಾ 40:3. “ ‘ಕರ್ತನ ದಾರಿಯನ್ನು ಸಿದ್ಧಮಾಡಿರಿ;
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು § ಮೂಲಭಾಷೆಯಲ್ಲಿ ಮರುಭೂಮಿಯೆಂದು ಉಪಯೋಗಿಸಲಾಗಿದೆ. ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. |
4. * ಕೆಲವು ಪ್ರತಿಗಳಲ್ಲಿ, ಪ್ರವಾದಿಗಳ ಎಂದು ಬರೆದಿದೆ. ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
|
5. ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
|
6. ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
|
7. ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
|
8. ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು. ಮತ್ತಾ 3:13-4:17; ಲೂಕ 3:21,22; 4:1-15; ಯೋಹಾ 1:31-33 PEPS
|
9. {ಯೇಸುವಿನ ದೀಕ್ಷಾಸ್ನಾನ} PS ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
|
10. ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
|
11. ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು. PEPS
|
13. ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
|
15. § ಮತ್ತಾ 4:17. “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.” PS
|
16. {ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು} (ಮತ್ತಾ 4:18-22; ಲೂಕ 5:1-11) PS ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
|
17. ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
|
19. ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
|
20. ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು. PS
|
21. {ಯೇಸು ದೆವ್ವವನ್ನು ಬಿಡಿಸಿದ್ದು} (ಮತ್ತಾ 8:14-16; ಲೂಕ 4:31-41) PS ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
|
22. ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
|
24. ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
|
27. ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
|
29. {ರೋಗಿಗಳನ್ನು ಸ್ವಸ್ಥಮಾಡಿದ್ದು} PS * ಪಾಠಾಂತರ ಆ ಮೇಲೆ ಆತನು ಬಂದನು. ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
|
31. ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು. PEPS
|
34. ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ. PS
|
35. {ಯೇಸುವಿನ ಏಕಾಂತ ಪ್ರಾರ್ಥನೆ} (ಲೂಕ 4:42-44) PS ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
|
38. ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
|
39. ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. PS
|
40. {ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು} (ಮತ್ತಾ 8:2-4; ಲೂಕ 5:12-16) PS ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. PEPS
|
44. ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ † ಯಾಜ 14:1-32. ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
|
45. ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು. PE
|