1. {ವಿವಾಹ ವಿಚ್ಛೇದನ} (ಮತ್ತಾ 19:1-9; ಲೂಕ 16:18) PS ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
|
2. ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.
|
4. ಅದಕ್ಕೆ ಅವರು, * ಧರ್ಮೋ 24:1. “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. PEPS
|
11. ಅದಕ್ಕೆ ಆತನು, § ಮತ್ತಾ 5:32: “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
|
12. ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು. PS
|
13. {ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು} (ಮತ್ತಾ 19:13-15; ಲೂಕ 18:15-17) PS ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
|
14. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
|
15. ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
|
17. {ಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹ} (ಮತ್ತಾ 19:16-30; ಲೂಕ 18:18-30) PS ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
|
19. * ವಿಮೋ 20:12-16: ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
|
21. ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
|
23. ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
|
24. ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, † ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28: ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
|
26. ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
|
27. ಯೇಸು ಅವರನ್ನು ದೃಷ್ಟಿಸಿ ನೋಡಿ ‡ ಲೂಕ 1:37; ರೋಮಾ. 4:21: “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
|
28. ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
|
29. ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
|
30. ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
|
32. {ಯೇಸು ತನ್ನ ಮರಣ ಪುನರುತ್ಥಾನವನ್ನು ಮೂರನೆಯ ಸಾರಿ ಮುಂದಾಗಿ ತಿಳಿಸಿದ್ದು} (ಮತ್ತಾ 20:17-19; ಲೂಕ 18:31-34) PS ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
|
33. ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
|
34. ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ § ಹೋಶೇ. 6:2: ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. PS
|
35. {ಜೆಬೆದಾಯನ ಮಕ್ಕಳ ಬಿನ್ನಹ} (ಮತ್ತಾ 20:20-28) PS ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.
|
37. ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
|
38. ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. * ಯೋಹಾ 18:11: ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? † ಲೂಕ 12:50. ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
|
40. ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
|
42. ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
|
45. ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ‡ 1 ತಿಮೊ. 2:6: ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು. PS
|
46. {ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ} (ಮತ್ತಾ 20:29-34; ಲೂಕ 18:35-43) PS ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
|
47. ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
|
48. ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
|
49. ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
|
51. ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
|
52. ಯೇಸು ಅವನಿಗೆ, “ಹೋಗು, § ಮಾರ್ಕ 5:34; ಲೂಕ 7:50; 17:19; ಅ. ಕೃ. 14:9: ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು. PE
|