1. {ಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದು} (ಮತ್ತಾ 26:1-16; ಲೂಕ 22:1-6; ಯೋಹಾ 11:47-53; 12:1-8) PS ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
|
2. “ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು. PEPS
|
3. ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
|
5. ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು. PEPS
|
6. ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
|
7. ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
|
8. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
|
9. ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು. PEPS
|
10. ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
|
11. ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. PS
|
12. {ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನವನ್ನು ಮಾಡಿದ್ದು} (ಮತ್ತಾ 26:17-29; ಲೂಕ 22:7-23; ಯೋಹಾ 13:21-29) PS ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
|
13. ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
|
14. ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ. PEPS
|
15. “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
|
18. ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
|
20. ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
|
21. ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು. PEPS
|
22. ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
|
23. ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
|
24. ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ * ಕೆಲವು ಪ್ರತಿಗಳಲ್ಲಿ, ಹೊಸ ಒಡಂಬಡಿಕೆಯ ರಕ್ತ ಎಂದು ಬರೆದಿದೆ. ವಿಮೋ 24:8; ಯೆರೆ 31:31; ಜೆಕ. 9:11: ಒಡಂಬಡಿಕೆಯ ರಕ್ತ.
|
25. ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು. PS
|
26. {ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು} (ಮತ್ತಾ 26:30-36; ಲೂಕ 22:31-53; ಯೋಹಾ 13:36-38; 18:1-11) PS ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
|
27. ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ;
“ ‘ನಾನು † ಜೆಕ. 13:7: ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು. |
30. ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ‡ ಮಾರ್ಕ 14:68,72: ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
|
31. ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು. PS
|
32. {ಗೆತ್ಸೇಮನೆಯಲ್ಲಿ ಯೇಸುವಿನ ಪ್ರಾರ್ಥನೆ} PS ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
|
34. ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.
|
35. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
|
36. “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
|
37. ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
|
38. ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.
|
40. ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
|
41. ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
|
42. ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು. PS
|
43. {ಯೇಸುವಿನ ಬಂಧನ} PS ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
|
44. ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
|
47. ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
|
48. ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?
|
49. ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.
|
51. ಆಗ ಯುವಕನೊಬ್ಬನು ಮೈಮೇಲೆ § ಹೊದಿಕೆ ಬಟ್ಟೆ. ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
|
53. {ಯೇಸು ಹಿರೀಸಭೆಯವರ ಮುಂದೆ} (ಮತ್ತಾ 26:57-75; ಲೂಕ 22:54-71; ಯೋಹಾ 18:12-27) PS ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
|
54. ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. PEPS
|
55. ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
|
57. (57-58) ತರುವಾಯ ಕೆಲವರು ಎದ್ದು ನಿಂತು, “ ‘ಇವನು * ಮಾರ್ಕ 15:29; ಯೋಹಾ 2:19: ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
|
59. ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.
|
60. ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು. PEPS
|
61. ಯೇಸುವು “ಹೌದು ನಾನೇ!
“ಇದಲ್ಲದೆ † ದಾನಿ. 3:13; ಕೀರ್ತ 110:1; ಮತ್ತಾ 24:30. ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು. PEPS |
63. ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
|
64. ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. PS
|
65. {ಪೇತ್ರನ ನಿರಾಕರಣೆ} PS ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
|
67. ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
|
69. ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು. PEPS
|
70. ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
|
71. ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು. PE
|