1. {ಪಿಲಾತನ ಮುಂದೆ ಯೇಸುವಿನ ವಿಚಾರಣೆ} (ಮತ್ತಾ 27:12-26; ಲೂಕ 23:1-25; ಯೋಹಾ 18:28-19:16) PS ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
|
4. ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು.
|
6. ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.
|
8. ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು. PEPS
|
9. (9-10) ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.
|
12. ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು.
|
14. ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.
|
15. ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. PS
|
16. {ಯೇಸುವನ್ನು ಪರಿಹಾಸ್ಯಮಾಡಿದ್ದು} (ಮತ್ತಾ 27:27-56; ಲೂಕ 23:26-49; ಯೋಹಾ 19:17-30) PS ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.
|
20. ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. PS
|
21. {ಯೇಸುವನ್ನು ಶಿಲುಬೆಗೇರಿಸಿದ್ದು} PS ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
|
22. ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.
|
23. ಅಲ್ಲಿ ಆತನಿಗೆ ರಕ್ತಬೋಳ * ದೇಹದ ನೋವನ್ನು ಹೊಗಲಾಡಿಸುವ ಒಂದು ದ್ರವ್ಯ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.
|
24. ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು. PEPS
|
27. ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. PEPS
|
28. (28-29) ‡ 28 ನೆಯ ವಚನವು ಕೆಲವು ಮೂಲಪ್ರತಿಗಳಲ್ಲಿ ಇಲ್ಲ. ಯೆಶಾ 53:12; ಲೂಕ 22:37 ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,
|
31. ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
|
32. ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು. PS
|
33. {ಯೇಸುವಿನ ಮರಣ} PS § ಮೂಲ: ಆರು ಗಂಟೆ. ಹನ್ನೆರಡು ಗಂಟೆಯಿಂದ * ಮೂಲ: ಒಂಭತ್ತು ತಾಸಿನ ತನಕ. ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
|
34. ಮೂರು ಗಂಟೆಗೆ ಯೇಸು, † ಕೀರ್ತ 22:1: “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
|
36. ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.
|
39. ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ‡ ದಾನಿ. 3:25: ದೇವಕುಮಾರನೇ” ಅಂದನು.
|
40. (40-41) ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ § ಲೂಕ 8:2, 3: ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, * ಮಾರ್ಕ 16:1: ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು. PS
|
42. {ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು} (ಮತ್ತಾ 27:57-61; ಲೂಕ 23:50-56; ಯೋಹಾ 19:38-42) PS ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.
|
43. ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.
|
44. ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು. PEPS
|
46. ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.
|