1. {ಯೇಸುವಿನ ಪುನರುತ್ಥಾನ} (ಮತ್ತಾ 28:1-8; ಲೂಕ 24:1-10; ಯೋಹಾ 20:1) PS ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
|
3. “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
|
5. ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. PEPS
|
6. ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
|
7. ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. PEPS
|
8. ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. PEPS
|
9. * ಯೋಹಾ 20:14-18: ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
|
12. {ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು} PS † ಲೂಕ 24:13, 15 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
|
14. ಅನಂತರ ‡ ಯೋಹಾ 20:19: ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
|
15. ಆ ಮೇಲೆ ಅವರಿಗೆ, § ಮತ್ತಾ 28:19: “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
|
17. “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
|
18. ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. PS
|
19. {ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು} PS ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ * ಲೂಕ 24:51; ಅ. ಕೃ. 1:9: ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
|
20. ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು † ಇಬ್ರಿ. 2:3, 4: ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ‡ ಅ. ಕೃ. 5:12: ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. § 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ. PE
|