1. {ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು} (ಮತ್ತಾ 8:28-34; ಲೂಕ 8:26-39) PS ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
|
2. ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
|
3. (3-4) ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. PEPS
|
5. ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
|
7. ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, * ಲೂಕ 1:32; 6:35; ಅ. ಕೃ. 16:17. ಪರಾತ್ಪರನಾದ ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ † ನನ್ನ ವಿಷಯಗಳು ನಿನಗೆ ಯಾಕೆ ಬೇಕು. ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
|
9. ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ‡ ಅಂದರೆ 6,000 ಸೈನಿಕರುಳ್ಳ ಸೈನ್ಯದಳ. ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,
|
13. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು. PEPS
|
14. ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
|
15. ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. PEPS
|
16. ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
|
18. ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
|
19. ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
|
20. † ಮಾರ್ಕ 1:45 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. PS
|
21. {ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ} (ಮತ್ತಾ 9:18-26; ಲೂಕ 8:40-56) PS ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
|
23. “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
|
26. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. PEPS
|
27. (27-28) ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
|
29. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು. PEPS
|
30. ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು
|
31. ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
|
33. ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
|
34. ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು. PEPS
|
35. ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು. PEPS
|
36. ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
|
37. ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
|
38. ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. PEPS
|
39. ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,
|
40. ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ, PEPS
|
41. ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ ‡ ಚಿಕ್ಕ ಹುಡುಗಿ ಎಂದು ಅರ್ಥ. “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
|
43. § ಮಾರ್ಕ 2:12; ಲೂಕ 2:47: ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು. PE
|