1. {ಶುದ್ಧ ಹಾಗೂ ಅಶುದ್ಧ} (ಮತ್ತಾ 15:1-20) PS ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
|
3. ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
|
4. ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು * ಕೆಲವು ಪ್ರತಿಗಳಲ್ಲಿ ಸ್ನಾನಮಾಡು ಎಂದು ಬರೆದಿದೆ. ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
|
5. ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
|
6. ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ:
† ಯೆಶಾ 29:13 “ ‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ. |
7. ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ
ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ. |
8. ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
|
9. ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ‡ ಲೂಕ 7:30; ಯೋಹಾ 12:48: ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
|
10. ‘ನಿನ್ನ § ವಿಮೋ 20:12: ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು * ವಿಮೋ 21:17: ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
|
11. ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
|
13. ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು. PEPS
|
14. ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
|
15. ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
|
16. “ † 16 ನೆಯ ವಚನವು ಮೂಲಗ್ರಂಥದ ಹೆಚ್ಚು ಪ್ರತಿಗಳಲ್ಲಿ ಇಲ್ಲ. ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು. PEPS
|
19. ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
|
20. ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
|
22. ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
|
24. {ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು} (ಮತ್ತಾ 15:21-28) PS ಯೇಸು ಅಲ್ಲಿಂದ ಹೊರಟು ‡ ಪಾಠಾಂತರ: ತೂರ್ ಸೀದೋನ್ ಪಟ್ಟಣಗಳ. ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
|
26. ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
|
27. ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
|
28. ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
|
29. ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
|
30. ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು. PS
|
31. {ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು} PS ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
|
32. ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
|
33. ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
|
34. ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
|
36. ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
|
37. § ಮಾರ್ಕ 6:51; 10:26; ಮತ್ತಾ 15:30, 31: ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು. PE
|