1. {ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು} (ಮತ್ತಾ 15:32-39) PS ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
|
2. “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
|
3. ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
|
4. ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
|
6. ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
|
7. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
|
10. ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. PS
|
11. {ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು} (ಮತ್ತಾ 16:1-12; ಲೂಕ 11:16; 12:1; ಯೋಹಾ 6:30) PS ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
|
12. ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
|
14. ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
|
15. ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
|
17. ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
|
19. ನಾನು * ಮಾರ್ಕ 6:41,43,44 ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
|
20. “ಮತ್ತು † ಮಾರ್ಕ 8:6, 8, 9: ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
|
22. {ಯೇಸು ಕುರುಡನಿಗೆ ಕಣ್ಣುಕೊಟ್ಟದ್ದು} PS ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
|
23. ‡ ಮಾರ್ಕ 7:33; ಮತ್ತಾ 20:34; ಯೋಹಾ 9:6: ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
|
25. ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
|
27. {ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡದ್ದು} (ಮತ್ತಾ 16:13-28; ಲೂಕ 9:18-27) PS ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
|
28. ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
|
29. ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
|
31. {ಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದು} PS ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು § ಹೋಶೇ. 6:2: ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
|
32. ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
|
33. ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, * ಮತ್ತಾ 4:10: “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. PEPS
|
34. ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
|
35. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
|
38. ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು. PE
|