1. ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು. PS
|
2. {ಯೇಸುವಿನ ರೂಪಾಂತರ} (ಮತ್ತಾ 17:1-13; ಲೂಕ 9:28-36) PS ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
|
3. ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
|
5. ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು * ಪರ್ಣಶಾಲೆ, ಮನೆಯನ್ನು. ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
|
7. † ಮಾರ್ಕ 1:11; ಮತ್ತಾ 3:17: ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
|
9. ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
|
10. ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
|
11. ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
|
12. ಅದಕ್ಕೆ ‡ ಮಲಾ. 4:5, 6; ಕೀರ್ತ 22:6; ಯೆಶಾ 53:2, 3; ದಾನಿ. 9:26; ಜೆಕ. 13:7: ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
|
13. ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. PS
|
14. {ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು} (ಮತ್ತಾ 17:14-21; ಲೂಕ 9:3-42) PS ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
|
17. ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
|
18. ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
|
19. ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
|
20. ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
|
21. ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
|
22. ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
|
23. ಯೇಸು ಅವನಿಗೆ, “ ‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
|
25. ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
|
26. ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
|
28. ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
|
29. ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ § ಕೆಲವು ಮೂಲಪ್ರತಿಗಳಲ್ಲಿ ಉಪವಾಸ ಹಾಗೂ ಪ್ರಾರ್ಥನೆಯಿಂದ ಎಂದು ಬರೆಯಲಾಗಿದೆ. ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು. PS
|
30. {ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು} (ಮತ್ತಾ 17:22-23; ಲೂಕ 9:43-45) PS ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
|
31. * ಹೋಶೇ. 6:2: ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
|
33. {ಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದು} (ಮತ್ತಾ 18:1-9; ಲೂಕ 9:46-50) PS ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
|
34. ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
|
35. ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
|
37. “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. PS
|
38. {ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ} PS ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
|
39. ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
|
41. ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ‡ ಮತ್ತಾ 10:42: ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ. PS
|
42. {ಪಾಪಕ್ಕೆ ಪ್ರೇರಣೆ} PS ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
|
43. (43-44) ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ § 9:44,46. ಕೆಲವು ಮೂಲ ಪ್ರತಿಗಳಲ್ಲಿ ಬೆಂಕಿಯ ಆರುವುದಿಲ್ಲ ಹಾಗೂ ಹುಳಗಳು ಸಾಯುವುದಿಲ್ಲ ಎಂದು ಬರೆದಿದೆ. ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
|
45. (45-46) ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
|
47. ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.
|
50. ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ * ಉಪ್ಪಿನಂತೆ ಒಬ್ಬರಿಗೊಬ್ಬರು ಒಳ್ಳೆಯದನ್ನು ಮಾಡಿರಿ. ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.” PE
|