1. ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. PEPS
|
2. ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
|
5. ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
|
8. ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
|
11. ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
|
13. ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
|
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
|
15. * ಮತ್ತಾ 11:24 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. PEPS
|
16. “ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
|
17. ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
|
18. ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
|
19. ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
|
21. ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
|
22. ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
|
23. ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. PEPS
|
25. ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ‡ ಪಿಶಾಚಿಗಳ ಒಡೆಯನು ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
|
26. ಆದರೂ ಅವರಿಗೆ ಹೆದರಬೇಡಿರಿ. § ಮಾರ್ಕ 4:22; ಲೂಕ 8:17; 12:2-9. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
|
27. ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
|
28. ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
|
29. ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
|
32. “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
|
33. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. PEPS
|
34. * ಲೂಕ 12:51-53. “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
|
37. ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
|
39. ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. PEPS
|
40. ‡ ಲೂಕ 10:16. “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; § ಮಾರ್ಕ 9:37; ಲೂಕ 9:48. ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
|
41. ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
|
42. ಮತ್ತು * ಮತ್ತಾ 25:40; ಮಾರ್ಕ 9:41. ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. PE
|