1.
2. [PS]ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. [PE]{#1ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು } [PS] [* ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು (ಯೆಶಾ 35:5, 6; 61:1) ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನ್ನು ಕೇಳಿ ಯೇಸುವಿನ ಬಳಿಗೆ. ]ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
3. “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
4. ಯೇಸು ಅವರಿಗೆ ಪ್ರತ್ಯುತ್ತರವಾಗಿ, [SCJ]“ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;[SCJ.]
5. [SCJ]ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.[SCJ.]
6. [SCJ]ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು”[SCJ.] ಎಂದು ಹೇಳಿದನು. [PE]
7. [PS]ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, [SCJ]“ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?[SCJ.]
8. [SCJ]ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.[SCJ.]
9. [SCJ]ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.[SCJ.]
10. [† ಮಲಾ. 3:1: ][SCJ]‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.[SCJ.]
11. [SCJ]ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
12. [SCJ]ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.[SCJ.]
13. [SCJ]ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.[SCJ.]
14. [SCJ]ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.[SCJ.]
15. [SCJ]ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.[SCJ.]
16. [SCJ]ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,[SCJ.]
17. [SCJ]‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.[SCJ.]
18. [SCJ]ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.[SCJ.]
19. [SCJ]ಮನುಷ್ಯಕುಮಾರನು ಬಂದನು,[SCJ.][‡ ಮತ್ತಾ 9:10; ಲೂಕ 15:2: ][SCJ]ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು[SCJ.] [§ ಕೆಲವು ಪ್ರತಿಗಳಲ್ಲಿ ಭ್ರಷ್ಟರ ಎಂಬುದಾಗಿದೆ. ][SCJ]ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.[SCJ.] [* ಆದರೆ ನಿಜವಾದ ಜ್ಞಾನಿಯು ಒಳ್ಳೆಯ ಕಾರ್ಯಗಳನ್ನು ಮಾಡುವುದರ ಮೂಲಕ ಜ್ಞಾನವನ್ನು ತೋರ್ಪಡಿಸುತ್ತಾನೆ ಅಂದನು. ][SCJ]ಆದರೆ ಜ್ಞಾನವು ಅದರ[SCJ.] [† ಕೆಲವು ಪ್ರತಿಗಳಲ್ಲಿ ಮಕ್ಕಳಿಂದ. ಅಂದರೆ ಜ್ಞಾನಾವಲಂಬಿಗಳಿಂದ ಎಂದು ಬರೆದದೆ; ಲೂಕ 7:35 ನೋಡಿರಿ. ][SCJ]ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ”[SCJ.] ಅಂದನು. [PE]
20. {#1ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು [BR]ಲೂಕ 10:12-15; ಲೂಕ 10:21-22 } [PS]ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
21. ಹೇಗೆಂದರೆ, [SCJ]“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.[SCJ.]
22. [SCJ]ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.[SCJ.]
23. [SCJ]ಎಲೈ ಕಪೆರ್ನೌಮೇ[SCJ.][‡ ಯೆಶಾ 14:13-15: ][SCJ]ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.[SCJ.]
24. [SCJ]ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು”[SCJ.] ಎಂದು ನಿಮಗೆ ಹೇಳುತ್ತೇನೆ ಅಂದನು. [PE]
25. [PS]ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, [SCJ]“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.[SCJ.]
26. [SCJ]ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.[SCJ.]
27. [§ ಮತ್ತಾ 28:18; ಯೋಹಾ 1:18; 6, 46: ][SCJ]ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.[SCJ.] [PE]
28. {#1ಯೇಸುವಿನಿಂದ ವಿಶ್ರಾಂತಿಯ ಆಹ್ವಾನ } [PS] [SCJ]“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.[SCJ.]
29. [* ಯೆರೆ 6:16; ಯೋಹಾ 13:15; ಫಿಲಿ. 2:5, 7, 8: ][SCJ]ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.[SCJ.]
30. [SCJ]ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ”[SCJ.] ಅಂದನು. [PE]