ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮತ್ತಾಯನು
1. {#1ಬಿತ್ತುವವನ ಸಾಮ್ಯ [BR]ಮಾರ್ಕ 4:1-20,30-34; ಲೂಕ 8:4-15; 13:18,19 } [PS]ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.
2. ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.
3. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. [PE]
4. [PS] [SCJ]“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.[SCJ.]
5. [SCJ]ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.[SCJ.]
6. [SCJ]ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.[SCJ.]
7. [SCJ]ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.[SCJ.]
8. [SCJ]ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.[SCJ.]
9. [SCJ]ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”[SCJ.] ಅಂದನು. [PE]
10. [PS]ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.
11. ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, [SCJ]“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.[SCJ.]
12. [SCJ]ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.[SCJ.]
13. [SCJ]ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.[SCJ.] [PE]
14. [QS] [SCJ]“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,[SCJ.] [QE][QS][* ಯೆಶಾ 6:9, 10: ][SCJ]‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.[SCJ.] [QE][QS][SCJ]ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.[SCJ.] [QE]
15. [QS] [SCJ]ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು.[SCJ.] [QE][QS][SCJ]ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ,[SCJ.] [QE][QS][SCJ]ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು[SCJ.] [QE][QS][SCJ]ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’ ”[SCJ.] ಎಂಬುದೇ. [QE]
16. [MS] [SCJ]“ಆದರೆ ನೀವು ಧನ್ಯರು ಏಕೆಂದರೆ[SCJ.][† ಲೂಕ 10:23, 24: ][SCJ]ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.[SCJ.]
17. [SCJ]ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.][‡ ಯೋಹಾ 8:56; ಇಬ್ರಿ. 11:13; 1 ಪೇತ್ರ. 1:10, 11. ][SCJ]ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.[SCJ.] [ME]
18. [PS] [SCJ]“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.[SCJ.]
19. [SCJ]ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ[SCJ.][§ ಮೂಲ: ಕೆಡುಕನು ][SCJ]ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.[SCJ.]
20. [SCJ]ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,[SCJ.]
21. [SCJ]ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.[SCJ.]
22. [SCJ]ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.[SCJ.]
23. [SCJ]ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ”[SCJ.] ಎಂದು ಹೇಳಿದನು. [PE]
24. {#1ಗೋದಿ ಮತ್ತು ಕಳೆಗಳ ಸಾಮ್ಯ } [PS]ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, [SCJ]“ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.[SCJ.]
25. [SCJ]ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.[SCJ.]
26. [SCJ]ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.[SCJ.]
27. [SCJ]ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.[SCJ.]
28. [SCJ]ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.[SCJ.]
29. [SCJ]ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.[SCJ.]
30. [SCJ]ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,[SCJ.][* ಮತ್ತಾ 3:12: ][SCJ]ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’ ”[SCJ.] ಅಂದನು. [PE]
31. {#1ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ } [PS]ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, [SCJ]“ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.[SCJ.]
32. [SCJ]ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.[SCJ.]
33. ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, [SCJ]“ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”[SCJ.] [PE]
34. [PS]ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.
35. ಹೀಗೆ, [† ಕೀರ್ತ 78:2: ]“ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
36. ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
37. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, [SCJ]“ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.[SCJ.]
38. [SCJ]ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ[SCJ.][‡ ಮತ್ತಾ 13:43; 8:12; ಮಾರ್ಕ 16:15; ಕೊಲೊ 1:6: ][SCJ]ರಾಜ್ಯದ ಮಕ್ಕಳು.[SCJ.]
39. [SCJ]ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.[SCJ.]
40. [SCJ]ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.[SCJ.]
41. [§ ಮತ್ತಾ 18:7; 24:31. ][SCJ]ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.[SCJ.]
42. [SCJ]ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು[SCJ.]
43. [SCJ]ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ[SCJ.] ಅಂದನು. [PE]
44. {#1ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ } [PS] [SCJ]“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.[SCJ.]
45. [SCJ]ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.[SCJ.]
46. [SCJ]ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.[SCJ.] [PE]
47. [PS] [SCJ]“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.[SCJ.]
48. [SCJ]ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.[SCJ.]
49. [SCJ]ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.[SCJ.]
50. [SCJ]ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.[SCJ.] [PE]
51. [PS] [SCJ]“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ”[SCJ.] ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
52. ಆಗ ಆತನು ಅವರಿಗೆ, [SCJ]“ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ”[SCJ.] ಎಂದು ಹೇಳಿದನು. [PE]
53.
54. [PS]ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು. [PE]{#1ಯೇಸುವನ್ನು ನಜರೇತ್ ಊರಿನವರು ತಾತ್ಸಾರ ಮಾಡಿದ್ದು [BR]ಮಾರ್ಕ 6:1-6; ಲೂಕ 4:15-30 } [PS]ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
55. ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
56. ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು [* ಮತ್ತಾ 11:6: ]ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
57. ಆದರೆ ಯೇಸುವು ಅವರಿಗೆ [† ಯೋಹಾ 4:44 ][SCJ]“ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ”[SCJ.] ಅಂದನು.
58. ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ. [PE]
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 28
ಬಿತ್ತುವವನ ಸಾಮ್ಯ
ಮಾರ್ಕ 4:1-20,30-34; ಲೂಕ 8:4-15; 13:18,19

1 ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು. 2 ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು. 3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. 4 “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. 5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು. 6 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು. 9 ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. 10 ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು. 11 ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ. 12 ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. 13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. 14 “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, * ಯೆಶಾ 6:9, 10: ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. 15 ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’ ” ಎಂಬುದೇ. 16 “ಆದರೆ ನೀವು ಧನ್ಯರು ಏಕೆಂದರೆ ಲೂಕ 10:23, 24: ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ. 17 ನಿಮಗೆ ಸತ್ಯವಾಗಿ ಹೇಳುತ್ತೇನೆ. ಯೋಹಾ 8:56; ಇಬ್ರಿ. 11:13; 1 ಪೇತ್ರ. 1:10, 11. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. 18 “ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ. 19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ§ ಮೂಲ: ಕೆಡುಕನು ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. 20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, 21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. 22 ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. 23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು. ಗೋದಿ ಮತ್ತು ಕಳೆಗಳ ಸಾಮ್ಯ 24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. 25 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. 26 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. 27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು. 28 ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು. 29 ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. 30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,* ಮತ್ತಾ 3:12: ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’ ” ಅಂದನು. ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ 31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. 32 ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು. 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.” 34 ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ. 35 ಹೀಗೆ, ಕೀರ್ತ 78:2: “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು. 36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು. 37 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು. 38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ಮತ್ತಾ 13:43; 8:12; ಮಾರ್ಕ 16:15; ಕೊಲೊ 1:6: ರಾಜ್ಯದ ಮಕ್ಕಳು. 39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. 40 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. 41 § ಮತ್ತಾ 18:7; 24: 31. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು. ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ 44 “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. 45 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. 47 “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. 48 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. 50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. 51 “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು. 52 ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು. 53 54 ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು. ಯೇಸುವನ್ನು ನಜರೇತ್ ಊರಿನವರು ತಾತ್ಸಾರ ಮಾಡಿದ್ದು
ಮಾರ್ಕ 6:1-6; ಲೂಕ 4:15-30
ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು? 55 ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ? 56 ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು * ಮತ್ತಾ 11:6: ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು. 57 ಆದರೆ ಯೇಸುವು ಅವರಿಗೆ ಯೋಹಾ 4:44 “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು. 58 ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 28
×

Alert

×

Kannada Letters Keypad References