1. {ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು} (ಮಾರ್ಕ 6:14-29; ಲೂಕ 9:7-9) PS ಆ ಕಾಲದಲ್ಲಿ * ರೋಮಾನ್ ಚಕ್ರಾಧಿಪತ್ಯದಲ್ಲಿ ದೇಶದ ಅಥವಾ ಪ್ರಾಂತ್ಯದ ನಾಲ್ಕನೆಯ ಒಂದು ಭಾಗದ ಅಧಿಪತಿ. ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
|
2. ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
|
3. ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
|
5. ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
|
6. ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
|
9. ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
|
11. ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
|
12. ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. PS
|
13. {ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು} (ಮಾರ್ಕ 6:30-44; ಲೂಕ 9:10-17; ಯೋಹಾ 6:1-14) PS ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
|
14. ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
|
15. ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
|
19. ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
|
22. {ಯೇಸು ಸಮುದ್ರದ ಮೇಲೆ ನಡೆದದ್ದು} (ಮಾರ್ಕ 6:45-52; ಯೋಹಾ 6:15-21) PS ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
|
23. ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ † ಲೂಕ 6:12; 9:18, 28; 11:1. ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
|
24. ಆದರೆ ದೋಣಿಯು ‡ ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆ ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
|
28. ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
|
30. ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
|
33. ಆಗ ದೋಣಿಯಲ್ಲಿದ್ದ ಶಿಷ್ಯರು § ಮತ್ತಾ 8:29; 16:16; ಮಾರ್ಕ 1:1; ಲೂಕ 1:35; ಕೀರ್ತ 2:7: “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು. PEPS
|
35. ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
|
36. ಅವರು ಆತನನ್ನು * ಮತ್ತಾ 9:20; ಲೂಕ 6:19: ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು. PE
|