1. {ಯೇಸು ರೂಪಾಂತರಗೊಂಡಿದ್ದು} (ಮಾರ್ಕ 9:2-13; ಲೂಕ 9:28-36) PS ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
|
2. ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
|
4. ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
|
5. ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ * ಮತ್ತಾ 3:17: “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
|
9. ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
|
10. ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
|
12. ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
|
14. {ಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದು} (ಮಾರ್ಕ 9:14-29; ಲೂಕ 9:37-42) PS ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
|
15. “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
|
17. ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
|
18. ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
|
19. ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
|
20. ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ‡ ಮತ್ತಾ 21:21; ಮಾರ್ಕ 11:23. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
|
21. ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. § ಮೂಲ ಗ್ರಂಥದಲ್ಲಿ ಇಲ್ಲ. ಆದರೆ ಕೆಲವು ಪ್ರತಿಗಳಲ್ಲಿ, ಆತನು, ಈ ರೀತಿಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. PS
|
22. {ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು} (ಮಾರ್ಕ 9:30-32; ಲೂಕ 9:43-45) PS ಅವರು * ಲೂಕ 2:44 ನೋಡಿರಿ; ಕೆಲವು ಪ್ರತಿಗಳಲ್ಲಿ, ಗಲಿಲಾಯದಲ್ಲಿರುವಾಗ ಎಂದು ಬರೆದದೆ. ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
|
23. ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು. PS
|
24. {ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು} PS ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ † ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ 30. 13; 38:26: ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
|
25. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
|
27. ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ‡ ಮೂಲ: ಶೆಕೆಲ್ ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು. PE
|