1. {#1ದೇವರ ರಾಜ್ಯದಲ್ಲಿ ದೊಡ್ಡವನು [BR]ಮಾರ್ಕ 9:33-37; ಲೂಕ 9:46-48 } [PS]ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
2. ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
3. ಅವರಿಗೆ, [SCJ]“ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
4. [SCJ]ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.[SCJ.]
5. [SCJ]ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.[SCJ.]
6. [SCJ]ಆದರೆ[SCJ.][* ಲೂಕ 17:1, 2: ][SCJ]ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.[SCJ.] [PE]
7. [PS] [SCJ]“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.[SCJ.]
8. [† ಮತ್ತಾ 5:29, 30; ಮಾರ್ಕ 9:43-47: ][SCJ]ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.[SCJ.]
9. [SCJ]ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.[SCJ.]
10. [SCJ]ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ[SCJ.][‡ ಕೀರ್ತ 34:7; ಲೂಕ 1:19; ಇಬ್ರಿ. 1:14: ][SCJ]ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.[SCJ.]
11. [SCJ]ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.[SCJ.][§ 11 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಲೂಕ 19:10 ನೋಡಿರಿ. ಮನುಷ್ಯಕುಮಾರನು ಕಳೆದುಹೋಗಿರುವುದನ್ನು ಹುಡುಕಿ ರಕ್ಷಿಸುವುದಕೋಸ್ಕರ ಬಂದನು. ] [PE]
12. {#1ಕಳೆದುಹೋದ ಕುರಿಯ ಸಾಮ್ಯ } [PS] [SCJ]“ನಿಮ್ಮಲ್ಲಿ[SCJ.][* ಲೂಕ 15:4, 7: ][SCJ]ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?[SCJ.]
13. [SCJ]ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
14. [SCJ]ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.[SCJ.] [PE]
15. {#1ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು } [PS] [SCJ]“ನಿನ್ನ ಸಹೋದರನು ನಿನ್ನ ವಿರುದ್ಧ[SCJ.][† ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ. ][SCJ]ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.[SCJ.]
16. [SCJ]ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ[SCJ.][‡ ಧರ್ಮೋ 19:15: ][SCJ]ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.[SCJ.]
17. [SCJ]ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ[SCJ.][§ ಕೆಲವು ಪ್ರತಿಗಳಲ್ಲಿ, ಭ್ರಷ್ಟನಂತೆಯೂ ಎಂದು ಬರೆದದೆ. ][SCJ]ಸುಂಕದವನಂತೆಯೂ ಇರಲಿ.[SCJ.] [PE]
18. [PS] [SCJ]“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
19. [* ಮತ್ತಾ 7:7, 11; ಯೋಹಾ 15:7; 16:23: ][SCJ]ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.[SCJ.]
20. [SCJ]ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ”[SCJ.] ಅಂದನು. [PE]
21. {#1ಕರುಣೆಯಿಲ್ಲದ ಸೇವಕನ ಸಾಮ್ಯ } [PS]ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
22. ಯೇಸು ಅವನಿಗೆ, [SCJ]“ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.[SCJ.]
23. [SCJ]ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.[SCJ.]
24. [SCJ]ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ[SCJ.][† ಮೂಲ 10,000 ತಲಾಂತು; ತಲಾಂತು ಅಂದರೆ ಸುಮಾರು 3,000 ರೂಪಾಯಿ. ][SCJ]ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.[SCJ.]
25. [SCJ]ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.[SCJ.]
26. [SCJ]ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.[SCJ.]
27. [SCJ]ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.[SCJ.]
28. [SCJ]ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.[SCJ.]
29. [SCJ]ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.[SCJ.]
30. [SCJ]ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.[SCJ.]
31. [SCJ]ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.[SCJ.]
32. [SCJ]ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?[SCJ.]
33. [SCJ]ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,[SCJ.]
34. [SCJ]ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.[SCJ.]
35. [‡ ಮತ್ತಾ 6:14, 15; ಯಾಕೋಬ 2:13: ][SCJ]ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು”[SCJ.] ಅಂದನು. [PE]