1. {#1ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು [BR]ಮಾರ್ಕ 10:1-12 } [PS]ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
2. ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು. [PE]
3. [PS]ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, [* ಮತ್ತಾ 5:31, 32: ]“ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
4. ಆತನು ಪ್ರತ್ಯುತ್ತರವಾಗಿ, [SCJ]“ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,[SCJ.]
5. [† ಆದಿ 2:24; 1 ಕೊರಿ 6:16: ][SCJ]‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’[SCJ.]
6. [SCJ]ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು”[SCJ.] ಅಂದನು. [PE]
7. [PS]ಅದಕ್ಕೆ ಅವರು ಆತನನ್ನು, [‡ ಧರ್ಮೋ 24:1. ]“ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
8. ಅದಕ್ಕೆ ಯೇಸು ಅವರಿಗೆ, [SCJ]“ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.[SCJ.]
9. [SCJ]ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;[SCJ.][§ ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ. ][SCJ]ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ”[SCJ.] ಎಂದು ನಿಮಗೆ ಹೇಳುತ್ತೇನೆ ಅಂದನು.
10. ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.
11. [SCJ]ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.[SCJ.]
12. [SCJ]ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು[SCJ.][* 1 ಕೊರಿ 7:32: ][SCJ]ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ”[SCJ.] ಎಂದು ಹೇಳಿದನು. [PE]
13. {#1ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು [BR]ಮಾರ್ಕ 10:13-16; ಲೂಕ 13:15-17 } [PS]ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
14. ಆದರೆ ಯೇಸು, [SCJ]“ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ”[SCJ.] ಎಂದು ಹೇಳಿದನು.
15. ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು. [PE]
16. {#1ಐಶ್ವರ್ಯವಂತನಾದ ಯುವಕನು [BR]ಮಾರ್ಕ 10:17-27; ಲೂಕ 18:18-27 } [PS]ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
17. ಆತನು ಅವನಿಗೆ, [SCJ]“ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.[SCJ.][† ಯಾಜ 18:5; ನೆಹೆ 9:29; ರೋಮಾ. 10:5; ಗಲಾ. 3:12: ][SCJ]ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ”[SCJ.] ಎಂದು ಹೇಳಿದನು.
18. ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, [SCJ]“ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.[SCJ.]
19. [‡ ವಿಮೋ 20:12-17; ಯಾಜ 19:18; ಲೂಕ 10:27: ][SCJ]ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು”[SCJ.] ಇವುಗಳೇ ಅಂದನು.
20. ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
21. ಯೇಸು ಅವನಿಗೆ, [SCJ]“ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”[SCJ.] ಎಂದು ಹೇಳಿದನು.
22. ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು. [PE]
23. [PS]ಆಗ ಯೇಸು ತನ್ನ ಶಿಷ್ಯರಿಗೆ, [SCJ]“ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
24. [SCJ]“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ”[SCJ.] ಅಂದನು.
25. ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.
26. ಯೇಸು ಅವರನ್ನು ದೃಷ್ಟಿಸಿ ನೋಡಿ [§ ಯೋಬ. 42:2; ಮಾರ್ಕ 14:36; ಲೂಕ 1:37: ][SCJ]“ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ”[SCJ.] ಅಂದನು. [PE]
27. {#1ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ [BR]ಮಾರ್ಕ 10:28-31; ಲೂಕ 18:28-30 } [PS]ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
28. ಯೇಸು ಅವರಿಗೆ, [SCJ]“ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ[SCJ.][* ಲೂಕ 22:30; ಪ್ರಕ 3:21. ][SCJ]ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.[SCJ.]
29. [SCJ]ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.[SCJ.]
30. [SCJ]ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.[SCJ.] [PE]