1. {ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು} (ಮಾರ್ಕ 10:1-12) PS ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
|
3. ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, * ಮತ್ತಾ 5:31, 32: “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
|
4. ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
|
5. † ಆದಿ 2:24; 1 ಕೊರಿ 6:16: ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
|
6. ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು. PEPS
|
7. ಅದಕ್ಕೆ ಅವರು ಆತನನ್ನು, ‡ ಧರ್ಮೋ 24:1. “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
|
8. ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.
|
9. ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; § ಈ ವಾಕ್ಯ ಕೆಲವು ಪ್ರತಿಗಳಲ್ಲಿ ಇಲ್ಲ. ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
|
11. ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.
|
12. ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು * 1 ಕೊರಿ 7:32: ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು. PS
|
13. {ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು} (ಮಾರ್ಕ 10:13-16; ಲೂಕ 13:15-17) PS ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
|
14. ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
|
16. {ಐಶ್ವರ್ಯವಂತನಾದ ಯುವಕನು} (ಮಾರ್ಕ 10:17-27; ಲೂಕ 18:18-27) PS ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.
|
17. ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. † ಯಾಜ 18:5; ನೆಹೆ 9:29; ರೋಮಾ. 10:5; ಗಲಾ. 3:12: ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
|
18. ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.
|
19. ‡ ವಿಮೋ 20:12-17; ಯಾಜ 19:18; ಲೂಕ 10:27: ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
|
20. ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
|
21. ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
|
23. ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
24. “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.
|
26. ಯೇಸು ಅವರನ್ನು ದೃಷ್ಟಿಸಿ ನೋಡಿ § ಯೋಬ. 42:2; ಮಾರ್ಕ 14:36; ಲೂಕ 1:37: “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು. PS
|
27. {ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ} (ಮಾರ್ಕ 10:28-31; ಲೂಕ 18:28-30) PS ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
|
28. ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ * ಲೂಕ 22:30; ಪ್ರಕ 3:21. ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
|
29. ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
|