1. {ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು} (ಮಾರ್ಕ 11:1-11; ಲೂಕ 10:29-40; ಯೋಹಾ 12:12-19) PS ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
|
2. ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
|
3. ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ‘ಇವು ನಮ್ಮ ಕರ್ತನಿಗೆ ಬೇಕಾಗಿವೆ’ ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು” ಎಂದು ಹೇಳಿ ಕಳುಹಿಸಿದನು.
|
5. † ಯೆಶಾ 62:11; ಜೆಕ. 9:9 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
|
8. ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
|
9. ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು,
‡ ದಾವೀದನ ಕುಮಾರನೇ ರಕ್ಷಿಸು. “ದಾವೀದನ ಕುಮಾರನಿಗೆ ಹೊಸನ್ನ! § ಕೀರ್ತ 118:25, 26 ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ * ರಕ್ಷಿಸು. ಹೊಸನ್ನ!” ಎಂದು ಆರ್ಭಟಿಸಿದರು. |
11. ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು. ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು (ಮಾರ್ಕ 11:11-24; ಲೂಕ 19:45-48) PS
|
12. ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
|
13. ಆತನು ಅವರಿಗೆ, † ಯೆಶಾ 56:7 “ ‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ‡ ಯೆರೆ 7:11 ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
|
15. ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
|
16. ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
|
19. ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
|
21. ಅದಕ್ಕೆ ಯೇಸು, § ಮತ್ತಾ 7:7; 17:20; ಅ. ಕೃ. 10:20; ರೋಮಾ. 4:20; ಯಾಕೋಬ 1:6 “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
|
23. {ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು} (ಮಾರ್ಕ 11:27-12:12; ಲೂಕ 20:1-19; 14:16-24) PS ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
|
24. ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
|
25. ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “ ‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
|
26. ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
|
27. ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
|
28. ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
|
29. ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
|
30. ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
|
31. ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’ ” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
32. ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ. PEPS
|
33. “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು * ಯೆಶಾ 5:1,2 ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು † ಕೋರಿಗೆ ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
|
34. ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,
|
35. ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
|
38. ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
|
41. ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
|
42. ಯೇಸು ಅವರಿಗೆ, ‡ ಕೀರ್ತ 118:22-23 “ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
|
44. § ಕೆಲವು ಪತ್ರಿಗಳಲ್ಲಿ 44 ನೆಯ ವಚನವಿಲ್ಲ; ಯೆಶಾ 8:14-15; ದಾನಿ. 2:34-35, 44 ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.
|
45. ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
|
46. ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು. PE
|