3. ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
|
4. † ಯಾರು ಹೊರಲಾರದಂಥ ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ‡ ಕದಲಿಸಲೊಲ್ಲರು ಮುಟ್ಟಲೊಲ್ಲರು.
|
5. ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ § ಧರ್ಮೋ 6:8; 11, 18 ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
|
8. ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
|
13. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
|
14. ಅಯ್ಯೋ, ಕಪಟಿಗಳಾದ † 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47 ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. PEPS
|
15. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. PEPS
|
16. “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
|
18. ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
|
20. ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
|
21. ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
|
22. ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
|
23. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
|
25. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
|
26. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. PEPS
|
27. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
|
28. ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
|
29. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
|
30. ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
|
34. ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
|
35. § ಆದಿ 4:8; 2 ಪೂರ್ವ 24:20,21; ಪ್ರಕ 18:24 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
|
37. “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! * ಧರ್ಮೋ 32:11; ರೂತ 2:12 ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
|
39. ಈಗಿಂದ, † ಕೀರ್ತ 118:26 ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’ ” ಅಂದನು. PE
|