ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
1. ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
2. “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ [* ಮೋಶೆಯ ಅಧಿಕಾರದಲ್ಲಿ] ಕುಳಿತುಕೊಂಡಿದ್ದಾರೆ;
3. ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
4. [† ಯಾರು ಹೊರಲಾರದಂಥ] ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು [‡ ಕದಲಿಸಲೊಲ್ಲರು] ಮುಟ್ಟಲೊಲ್ಲರು.
5. ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ [§ ಧರ್ಮೋ 6:8; 11, 18] ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
6. ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
7. ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.
8. ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
9. ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
10. ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
11. ಆದರೆ [* ಮತ್ತಾ 20:26; ಮಾರ್ಕ 9:35] ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
12. ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. [PE][PS]
13. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
14. ಅಯ್ಯೋ, ಕಪಟಿಗಳಾದ [† 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47] ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. [PE][PS]
15. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. [PE][PS]
16. “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
17. ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?
18. ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
19. ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?
20. ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
21. ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
22. ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
23. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
24. ಕುರುಡ ಮಾರ್ಗದರ್ಶಿಗಳೇ, ನೀವು [‡ ಗುಂಗರೆ] ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. [PE][PS]
25. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
26. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. [PE][PS]
27. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
28. ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
29. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
30. ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
31. ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
32. ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
33. ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
34. ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
35. [§ ಆದಿ 4:8; 2 ಪೂರ್ವ 24:20,21; ಪ್ರಕ 18:24] ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
36. ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. [PE][PS]
37. “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! [* ಧರ್ಮೋ 32:11; ರೂತ 2:12] ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
38. ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
39. ಈಗಿಂದ, [† ಕೀರ್ತ 118:26] ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’ ” ಅಂದನು. [PE]

Notes

No Verse Added

Total 28 Chapters, Current Chapter 23 of Total Chapters 28
ಮತ್ತಾಯನು 23:25
1. ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
2. “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ * ಮೋಶೆಯ ಅಧಿಕಾರದಲ್ಲಿ ಕುಳಿತುಕೊಂಡಿದ್ದಾರೆ;
3. ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
4. ಯಾರು ಹೊರಲಾರದಂಥ ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಕದಲಿಸಲೊಲ್ಲರು ಮುಟ್ಟಲೊಲ್ಲರು.
5. ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ § ಧರ್ಮೋ 6:8; 11, 18 ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
6. ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
7. ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.
8. ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
9. ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
10. ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
11. ಆದರೆ * ಮತ್ತಾ 20:26; ಮಾರ್ಕ 9:35 ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
12. ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. PEPS
13. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
14. ಅಯ್ಯೋ, ಕಪಟಿಗಳಾದ 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47 ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. PEPS
15. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. PEPS
16. “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
17. ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?
18. ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
19. ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?
20. ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
21. ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
22. ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
23. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
24. ಕುರುಡ ಮಾರ್ಗದರ್ಶಿಗಳೇ, ನೀವು ಗುಂಗರೆ ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. PEPS
25. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
26. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. PEPS
27. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
28. ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
29. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
30. ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
31. ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
32. ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
33. ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
34. ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
35. § ಆದಿ 4:8; 2 ಪೂರ್ವ 24:20,21; ಪ್ರಕ 18:24 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
36. ಇದೆಲ್ಲಾ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. PEPS
37. “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! * ಧರ್ಮೋ 32:11; ರೂತ 2:12 ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
38. ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
39. ಈಗಿಂದ, ಕೀರ್ತ 118:26 ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’ ” ಅಂದನು. PE
Total 28 Chapters, Current Chapter 23 of Total Chapters 28
×

Alert

×

kannada Letters Keypad References