1. {#1ಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದು [BR]ಮಾರ್ಕ 12:38-40; ಲೂಕ 20:45-47 } [PS]ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
2. [SCJ]“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ[SCJ.][* ಮೋಶೆಯ ಅಧಿಕಾರದಲ್ಲಿ ][SCJ]ಕುಳಿತುಕೊಂಡಿದ್ದಾರೆ;[SCJ.]
3. [SCJ]ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.[SCJ.]
4. [† ಯಾರು ಹೊರಲಾರದಂಥ ][SCJ]ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು[SCJ.] [‡ ಕದಲಿಸಲೊಲ್ಲರು ][SCJ]ಮುಟ್ಟಲೊಲ್ಲರು.[SCJ.]
5. [SCJ]ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ[SCJ.][§ ಧರ್ಮೋ 6:8; 11, 18 ][SCJ]ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.[SCJ.]
6. [SCJ]ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;[SCJ.]
7. [SCJ]ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.[SCJ.]
8. [SCJ]ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.[SCJ.]
9. [SCJ]ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ[SCJ.]
10. [SCJ]ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು[SCJ.]
11. [SCJ]ಆದರೆ[SCJ.][* ಮತ್ತಾ 20:26; ಮಾರ್ಕ 9:35 ][SCJ]ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.[SCJ.]
12. [SCJ]ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.[SCJ.] [PE]
13. [PS] [SCJ]“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.[SCJ.]
14. [SCJ]ಅಯ್ಯೋ, ಕಪಟಿಗಳಾದ[SCJ.][† 14 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಮಾರ್ಕ 12:40; ಲೂಕ 20:47 ][SCJ]ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.[SCJ.] [PE]
15.
16. [PS] [SCJ]“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.[SCJ.] [PE][PS] [SCJ]“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.[SCJ.]
17. [SCJ]ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?[SCJ.]
18. [SCJ]ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.[SCJ.]
19. [SCJ]ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?[SCJ.]
20. [SCJ]ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.[SCJ.]
21. [SCJ]ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.[SCJ.]
22. [SCJ]ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.[SCJ.]
23. [SCJ]ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.[SCJ.]
24. [SCJ]ಕುರುಡ ಮಾರ್ಗದರ್ಶಿಗಳೇ, ನೀವು[SCJ.][‡ ಗುಂಗರೆ ][SCJ]ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.[SCJ.] [PE]
25. [PS] [SCJ]“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.[SCJ.]
26. [SCJ]ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.[SCJ.] [PE]
27. [PS] [SCJ]“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.[SCJ.]
28. [SCJ]ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.[SCJ.]
29. [SCJ]ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,[SCJ.]
30. [SCJ]‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.[SCJ.]
31. [SCJ]ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.[SCJ.]
32. [SCJ]ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.[SCJ.]
33. [SCJ]ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?[SCJ.]
34. [SCJ]ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.[SCJ.]
35. [§ ಆದಿ 4:8; 2 ಪೂರ್ವ 24:20,21; ಪ್ರಕ 18:24 ][SCJ]ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.[SCJ.]
36. [SCJ]ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.] [PE]
37. [PS] [SCJ]“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ![SCJ.][* ಧರ್ಮೋ 32:11; ರೂತ 2:12 ][SCJ]ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.[SCJ.]
38. [SCJ]ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.[SCJ.]
39. [SCJ]ಈಗಿಂದ,[SCJ.][† ಕೀರ್ತ 118:26 ][SCJ]‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’ ”[SCJ.] ಅಂದನು. [PE]