ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮತ್ತಾಯನು
1. {#1ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು [BR]ಮಾರ್ಕ 13:1-31; ಲೂಕ 21:5-33 } [PS]ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
2. ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, [SCJ]“ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”[SCJ.] ಅಂದನು. [PE]
3. [PS]ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ [* ಕ್ರಿಸ್ತನ ಮರುಬರೋಣ ]ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
4. ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, [SCJ]“ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.[SCJ.]
5. [SCJ]ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.[SCJ.]
6. [SCJ]ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.[SCJ.]
7. [SCJ]ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;[SCJ.]
8. [SCJ]ಇವೆಲ್ಲಾ[SCJ.] (ನೂತನ ಕಾಲವು ಹುಟ್ಟುವ) [SCJ]ಪ್ರಸವವೇದನೆಯ ಪ್ರಾರಂಭ.[SCJ.] [PE]
9. [PS] [SCJ]“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.[SCJ.]
10. [SCJ]ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.[SCJ.]
11. [SCJ]ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.[SCJ.]
12. [SCJ]ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.[SCJ.]
13. [SCJ]ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.[SCJ.]
14. [SCJ]ಇದಲ್ಲದೆ[SCJ.][† ಮತ್ತಾ 4:23; ರೋಮಾ 10:18 ][SCJ]ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.[SCJ.] [PE]
15. [PS] [SCJ]“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ[SCJ.][‡ ದಾನಿ. 9:27; 11:31; 12:11 ][SCJ]ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ[SCJ.] (ಇದನ್ನು ಓದುವವನು ತಿಳಿದುಕೊಳ್ಳಲಿ)
16. [SCJ]ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;[SCJ.]
17. [SCJ]ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,[SCJ.]
18. [SCJ]ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.[SCJ.]
19. [SCJ]ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.[SCJ.]
20. [SCJ]ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.[SCJ.]
21. [SCJ]ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.[SCJ.]
22. [SCJ]ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.[SCJ.]
23. [SCJ]ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.[SCJ.]
24. [SCJ]ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.[SCJ.]
25. [SCJ]ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.[SCJ.]
26. [SCJ]ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.[SCJ.]
27. [SCJ]ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.[SCJ.]
28. [§ ಯೋಬ 39:30; ಲೂಕ 17:37 ][SCJ]ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.[SCJ.] [PE]
29. [PS] [SCJ]“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.[SCJ.]
30. [SCJ]ಆಗ[SCJ.][* ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7 ][SCJ]ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.[SCJ.]
31. [SCJ]ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.[SCJ.] [PE]
32. {#1ಅಂಜೂರ ಮರದ ದೃಷ್ಟಾಂತ } [PS] [SCJ]“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.[SCJ.]
33. [SCJ]ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ[SCJ.][† ಆತನು ಹತ್ತಿರದಲ್ಲಿದ್ದಾನೆ, ಬಾಗಿಲಲ್ಲೇ ಇದ್ದಾನೆ ][SCJ]ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.[SCJ.]
34. [SCJ]ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
35. [‡ ಕೀರ್ತ 102:26; 27; ಯೆಶಾ 51:6; 1 ಪೇತ್ರ 1:25 ][SCJ]ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.[SCJ.] [PE]
36. {#1ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು [BR]ಮಾರ್ಕ 13:32-37; ಲೂಕ 21:34-36; 19:12-27 } [PS] [SCJ]“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,[SCJ.]
37. [§ ಲೂಕ 17:26-30; 34-36 ][SCJ]ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.[SCJ.]
38. [SCJ]ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.[SCJ.]
39. [SCJ]ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.[SCJ.]
40. [SCJ]ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.[SCJ.]
41. [SCJ]ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.[SCJ.] [PE]
42. [PS] [SCJ]“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.[SCJ.]
43. [* ಲೂಕ 12:39-46 ][SCJ]ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.[SCJ.]
44. [SCJ]ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.[SCJ.]
45. [SCJ]ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?[SCJ.]
46. [SCJ]ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.[SCJ.]
47. [SCJ]ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.[SCJ.]
48. [SCJ]ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು[SCJ.]
49. [SCJ]ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,[SCJ.]
50. [SCJ]ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ[SCJ.]
51. [SCJ]ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.[SCJ.] [PE]
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 28
ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು
ಮಾರ್ಕ 13:1-31; ಲೂಕ 21:5-33

1 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು. 2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. 3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ * ಕ್ರಿಸ್ತನ ಮರುಬರೋಣ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು 4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. 5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. 6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 7 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; 8 ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ. 9 “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. 10 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. 11 ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. 12 ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. 13 ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು. 14 ಇದಲ್ಲದೆ ಮತ್ತಾ 4:23; ರೋಮಾ 10:18 ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. 15 “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ದಾನಿ. 9:27; 11:31; 12:11 ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ) 16 ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; 17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, 18 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ. 19 ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ. 20 ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. 21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. 22 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು. 23 ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. 24 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 25 ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. 26 ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ. 27 ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. 28 § ಯೋಬ 39:30; ಲೂಕ 17:37 ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು. 29 “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. 30 ಆಗ* ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7 ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. 31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು. ಅಂಜೂರ ಮರದ ದೃಷ್ಟಾಂತ 32 “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ. 33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆತನು ಹತ್ತಿರದಲ್ಲಿದ್ದಾನೆ, ಬಾಗಿಲಲ್ಲೇ ಇದ್ದಾನೆ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. 34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 35 ಕೀರ್ತ 102:26; 27; ಯೆಶಾ 51:6; 1 ಪೇತ್ರ 1:25 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ. ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
ಮಾರ್ಕ 13:32-37; ಲೂಕ 21:34-36; 19:12-27

36 “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು, 37 § ಲೂಕ 17:26-30; 34-36 ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು. 38 ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. 39 ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು. 40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. 41 ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು. 42 “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. 43 * ಲೂಕ 12:39-46 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. 44 ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45 ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು? 46 ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. 47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 48 ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು 49 ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, 50 ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ 51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 28
×

Alert

×

Kannada Letters Keypad References