1. ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
|
2. ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. PEPS
|
3. ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ * ಕ್ರಿಸ್ತನ ಮರುಬರೋಣ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
|
6. ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
|
7. ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
|
9. “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
|
14. ಇದಲ್ಲದೆ † ಮತ್ತಾ 4:23; ರೋಮಾ 10:18 ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. PEPS
|
15. “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ‡ ದಾನಿ. 9:27; 11:31; 12:11 ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
|
21. ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
|
22. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
|
24. ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
|
26. ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
|
29. “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
|
30. ಆಗ * ಮತ್ತಾ 24:3; 26:64; ದಾನಿ. 7:13; ಜೆಕ. 12:12; ಪ್ರಕ 1:7 ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
|
31. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು. PS
|
32. {ಅಂಜೂರ ಮರದ ದೃಷ್ಟಾಂತ} PS “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
|
33. ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ † ಆತನು ಹತ್ತಿರದಲ್ಲಿದ್ದಾನೆ, ಬಾಗಿಲಲ್ಲೇ ಇದ್ದಾನೆ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
|
35. ‡ ಕೀರ್ತ 102:26; 27; ಯೆಶಾ 51:6; 1 ಪೇತ್ರ 1:25 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ. PS
|
36. {ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು} (ಮಾರ್ಕ 13:32-37; ಲೂಕ 21:34-36; 19:12-27) PS “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
|
38. ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
|
39. ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
|
41. ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು. PEPS
|
43. * ಲೂಕ 12:39-46 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
|
45. ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
|