1. {#1ಹತ್ತುಮಂದಿ ಕನ್ಯೆಯರ ಸಾಮ್ಯ } [PS] [SCJ]“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು[SCJ.][* ದೀವಟಿಗೆಗಳನ್ನು ][SCJ]ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.[SCJ.]
2. [SCJ]ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.[SCJ.]
3. [SCJ]ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.[SCJ.]
4. [SCJ]ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.[SCJ.]
5. [SCJ]ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.[SCJ.]
6. [SCJ]ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.[SCJ.]
7. [SCJ]ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.[SCJ.]
8. [SCJ]ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.[SCJ.]
9. [SCJ]ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.[SCJ.]
10. [SCJ]ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.[SCJ.]
11. [SCJ]ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.[SCJ.]
12. [SCJ]ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.[SCJ.]
13. [† ಮತ್ತಾ 24:42 ][SCJ]ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.[SCJ.] [PE]
14. {#1ತಲಾಂತುಗಳ ಸಾಮ್ಯ } [PS] [SCJ]“ದೇವರ ರಾಜ್ಯವು ಹೇಗೆಂದರೆ[SCJ.][‡ ಲೂಕ 9:12-27 ][SCJ]ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.[SCJ.]
15. [SCJ]ಅವನು ಒಬ್ಬನಿಗೆ ಐದು[SCJ.][§ 3,000 ರೂಪಾಯಿ ][SCJ]ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.[SCJ.]
16. [SCJ]ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.[SCJ.]
17. [SCJ]ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.[SCJ.]
18. [SCJ]ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.[SCJ.]
19. [SCJ]ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು[SCJ.]
20. [SCJ]ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.[SCJ.]
21. [SCJ]ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.[SCJ.]
22. [SCJ]ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.[SCJ.]
23. [SCJ]ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.[SCJ.]
24. [SCJ]ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು[SCJ.]
25. [SCJ]ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.[SCJ.]
26. [SCJ]ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?[SCJ.]
27. [SCJ]ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,[SCJ.]
28. [SCJ]ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.[SCJ.]
29. [SCJ]ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.[SCJ.]
30. [SCJ]ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’[SCJ.] [PE]
31. [PS] [* ಯೋವೇ. 3:12 ][SCJ]“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;[SCJ.]
32. [SCJ]ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.[SCJ.]
33. [SCJ]ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.[SCJ.]
34. [SCJ]ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.[SCJ.]
35. [SCJ]ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;[SCJ.]
36. [SCJ]ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. [SCJ.]
37. [SCJ]ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?[SCJ.]
38. [SCJ]ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?[SCJ.]
39. [SCJ]ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.[SCJ.]
40. [SCJ]ಅದಕ್ಕೆ ಉತ್ತರವಾಗಿ ಅರಸನು,[SCJ.][† ಮತ್ತಾ 10:42 ][SCJ]‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.[SCJ.]
41. [SCJ]ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.[SCJ.]
42. [SCJ]ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.[SCJ.]
43. [SCJ]ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.[SCJ.]
44. [SCJ]ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.[SCJ.]
45. [SCJ]ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.[SCJ.]
46. [SCJ]ಮತ್ತು ಅನೀತಿವಂತರಾದ ಇವರು[SCJ.][‡ ದಾನಿ. 12:2; ಯೋಹಾ 5:29 ][SCJ]ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.[SCJ.] [PE]