1. {ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು} (ಮಾರ್ಕ 14:1-11; ಲೂಕ 22:1-6; ಯೋಹಾ 12:1-8) PS ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;
|
6. {ಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯ್ಯಿದದ್ದು} PS ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು
|
7. † ಚಂದ್ರಕಾಂತಶಿಲೆಯ ಭರಣಿಯನ್ನು ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.
|
10. ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
|
13. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು. PS
|
14. {ಇಸ್ಕರಿಯೋತನು ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದು} PS ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
|
15. “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
|
17. {ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು} (ಮಾರ್ಕ 14:12-31; ಲೂಕ 22:7-34; ಯೋಹಾ 13:21-26) PS ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
|
18. ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.
|
21. ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.
|
24. ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
|
25. ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
|
26. ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.
|
27. ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,
|
29. ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
|
31. ಆಗ ಯೇಸು, ಅವರಿಗೆ, § ಜೆಕ. 13:7 “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
|
32. “ಆದರೆ ನಾನು ಜೀವಿತನಾಗಿ ಎದ್ದ ಮೇಲೆ * ಮತ್ತಾ 28:7, 10, 16; ಮಾರ್ಕ 16:7 ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
|
33. ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
|
34. ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.
|
35. ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು. PS
|
36. {ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು} (ಮಾರ್ಕ 14:32-50; ಲೂಕ 22:40-53; ಯೋಹಾ 18:1-12) PS ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
|
38. ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
|
39. ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, † ಇಬ್ರಿ. 5:7 “ನನ್ನ ತಂದೆಯೇ, ಸಾಧ್ಯವಾದರೆ ಈ ‡ ಕಷ್ಟಾನುಭವ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
|
40. ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
|
41. § ಮಾರ್ಕ 13:33; ಕೊಲೊ 4:2 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
|
42. ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
|
44. ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.
|
45. ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
|
47. {ಶತ್ರುಗಳು ಯೇಸುವನ್ನು ಹಿಡಿದದ್ದು} PS ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
|
48. ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
|
50. ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
|
51. ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
|
52. ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
|
53. ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
|
55. ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;
|
56. ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. PS
|
57. {ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು} (ಮಾರ್ಕ 14:53-72; ಲೂಕ 22:54-71; ಯೋಹಾ 18:12-27) PS ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
|
58. ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
|
59. ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
|
61. “ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’ ” ಅಂದರು;
|
62. ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
|
63. ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
|
64. ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ * ಮತ್ತಾ 16:7; ಕೀರ್ತ 110:1 ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
|
65. ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
|
69. {ಪೇತ್ರನು ಯೇಸುವನ್ನು ಅರಿಯೆನೆಂದು ಹೇಳಿದ್ದು} PS ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
|
71. ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
|
73. ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
|
74. ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
|
75. ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. PE
|