3. {ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು} PS ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ * ಮತ್ತಾ 26:14-15 ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
|
4. “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
|
6. ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
|
7. ಬಳಿಕ ಆಲೋಚನೆಮಾಡಿ † ಅ. ಕೃ. 1:18,19 ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
|
9. ಅದೇನೆಂದರೆ, § ಜೆಕ. 11:12,13 “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
|
10. ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಮಾರ್ಕ 15:2-15; ಲೂಕ 23:2,3,13-25; ಯೋಹಾ 18:29-40; 19:16 PEPS
|
11. {ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು} PS ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
|
13. ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.
|
17. ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
|
19. ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
|
20. ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
|
21. ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
|
22. ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
|
23. ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
|
24. ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ * ಮತ್ತಾ 26:5 ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು † ಧರ್ಮೋ 21:6-8 ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ‡ ರಕ್ತದಲ್ಲಿ ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
|
26. ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಮಾರ್ಕ 15:16-41; ಲೂಕ 23:26,33-49; ಯೋಹಾ 19:2-3,16-30 PEPS
|
27. {ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು} PS ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
|
29. ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ
|
31. ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. PS
|
32. {ಗೊಲ್ಗೊಥಾಕ್ಕೆ ಪ್ರಯಾಣ} PS ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
|
34. * ಕೀರ್ತ 69:21 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
|
37. ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
|
38. ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
|
40. “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
|
41. ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
|
42. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
|
43. ಅವನು † ಕೀರ್ತ 22:8 ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’ ” ಎಂದು ಅಣಕಿಸಿ ಮಾತನಾಡುತ್ತಿದ್ದರು.
|
45. {ಯೇಸುವಿನ ಮರಣ} PS ‡ 6 ತಾಸಿನಿಂದ 9 ತಾಸಿನ ತನಕ ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
|
46. ಸುಮಾರು ಮೂರು ಘಂಟೆಗೆ ಯೇಸು, § ಕೀರ್ತ 22:1 “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
|
48. ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
|
49. ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು * ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ 19:34 .
|
52. ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ † ಸತ್ತುಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
|
53. ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
|
54. ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ‡ ದಾನಿ. 3:25 ದೇವಕುಮಾರನಾಗಿದ್ದನು” ಅಂದರು.
|
55. ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
|
57. {ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು} (ಮಾರ್ಕ 15:42-47; ಲೂಕ 23:50-56; ಯೋಹಾ 19:38-42) PS ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
|
58. ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
|
63. “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
|
64. ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
|