ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮತ್ತಾಯನು
1. {#1ಯೇಸುವಿನ ಪುನರುತ್ಥಾನ [BR]ಮಾರ್ಕ 16:1-10; ಲೂಕ 24:1-10; ಯೋಹಾ 20:1-18 } [PS]ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ [* ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ ]ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
2. ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
3. ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
4. ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.
5. ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
6. ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
7. ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, [† ಮತ್ತಾ 28:10,16; 26:32 ]ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
8. ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
9. ಆಗ ಯೇಸು ಅವರನ್ನು ಭೇಟಿಯಾಗಿ, [SCJ]“ನಿಮಗೆ ಶುಭವಾಗಲಿ”[SCJ.] ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
10. ಆಗ ಯೇಸು ಅವರಿಗೆ, [SCJ]“ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು”[SCJ.] ಎಂದು ಹೇಳಿದನು. [PE]
11. {#1ಕಾವಲುಗಾರನ ಸುದ್ದಿ } [PS]ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
12. ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
13. “ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
14. ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
15. ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. [PE]
16. {#1ಯೇಸುವಿನ ಕಡೆಯ ಅಪ್ಪಣೆ } [PS]ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
17. ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
18. ಯೇಸು ಅವರ ಹತ್ತಿರಕ್ಕೆ ಬಂದು, [SCJ]“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.[SCJ.]
19. [‡ ಮಾರ್ಕ 16:15,16; ಲೂಕ 24:47 ][SCJ]ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.[SCJ.]
20. [SCJ]ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು[SCJ.][§ ಮತ್ತಾ 18:20; ಯೋಹಾ 14:18,19 ][SCJ]ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”[SCJ.] ಎಂದು ಹೇಳಿದನು.[PE]
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 28
ಯೇಸುವಿನ ಪುನರುತ್ಥಾನ
ಮಾರ್ಕ 16:1-10; ಲೂಕ 24:1-10; ಯೋಹಾ 20:1-18

1 ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ * ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು. 2 ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. 3 ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; 4 ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. 5 ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; 6 ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; 7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಮತ್ತಾ 28:10,16; 26:32 ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು. 8 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. 9 ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. 10 ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು. ಕಾವಲುಗಾರನ ಸುದ್ದಿ 11 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. 12 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, 13 “ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ; 14 ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು. 15 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. ಯೇಸುವಿನ ಕಡೆಯ ಅಪ್ಪಣೆ 16 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17 ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18 ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19 ಮಾರ್ಕ 16:15,16; ಲೂಕ 24:47 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು§ ಮತ್ತಾ 18:20; ಯೋಹಾ 14:18,19 ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 28 / 28
×

Alert

×

Kannada Letters Keypad References