1. {ಯೇಸುವಿನ ಪುನರುತ್ಥಾನ} (ಮಾರ್ಕ 16:1-10; ಲೂಕ 24:1-10; ಯೋಹಾ 20:1-18) PS ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ * ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
|
2. ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
|
5. ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
|
7. ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, † ಮತ್ತಾ 28:10,16; 26:32 ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
|
8. ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
|
9. ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
|
10. ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು. PS
|
11. {ಕಾವಲುಗಾರನ ಸುದ್ದಿ} PS ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
|
13. “ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
|
14. ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
|
15. ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. PS
|
16. {ಯೇಸುವಿನ ಕಡೆಯ ಅಪ್ಪಣೆ} PS ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
|
19. ‡ ಮಾರ್ಕ 16:15,16; ಲೂಕ 24:47 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
|
20. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು § ಮತ್ತಾ 18:20; ಯೋಹಾ 14:18,19 ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. PE
|