1. {ಸೈತಾನನು ಯೇಸುವನ್ನು ಶೋಧಿಸಿದ್ದು} PS ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
|
3. ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
|
4. ಯೇಸು, * ಧರ್ಮೋ 8:3 “ ‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು. PEPS
|
6. ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‡ ಕೀರ್ತ 91:11,12 ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
|
8. ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
|
10. ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ * ಧರ್ಮೋ 6:13; 10:16 ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು. PEPS
|
11. ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು. ಮಾರ್ಕ 1:14,15; ಲೂಕ 4:14,15 PEPS
|
12. {ಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದು} PS ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
|
13. ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
|
15. ‡ ಯೆಶಾ 9:1,2 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
|
16. ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
|
18. {ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು} (ಮಾರ್ಕ 1:16-20; ಲೂಕ 5:2-11; ಯೋಹಾ 1:40-42) PS ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
|
19. ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
|
21. ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
|
23. {ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು} (ಮಾರ್ಕ 1:39; ಲೂಕ 4:15-44; 6:17-19) PS ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
|
24. ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
|
25. ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. PE
|