1. {ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ} PS ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
|
11. “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
|
12. † ಅ. ಕೃ. 5:41; ರೋಮಾ. 5:3 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ. PEPS
|
13. “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
|
15. ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
|
16. ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. PEPS
|
17. “ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.
|
18. ನಿಮಗೆ ಸತ್ಯವಾಗಿ ಹೇಳುತ್ತೇನೆ, § ಮತ್ತಾ 24:35; ಲೂಕ 16:17 ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
|
19. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
|
20. ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. PEPS
|
21. * ವಿಮೋ 20:13 “ ‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.
|
22. ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, † ಮೂಲ: ಬೆಂಕಿಯ ಕುಂಡಕ್ಕೆ ಅಗ್ನಿ ನರಕಕ್ಕೆ ಗುರಿಯಾಗುವನು.
|
23. ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
|
24. ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. PEPS
|
25. “ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
|
26. ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ. PEPS
|
28. ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
|
29. ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
|
30. § ಮತ್ತಾ 18:8; ಮಾರ್ಕ 9:43 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
|
32. ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ. PEPS
|
33. “ಮತ್ತು, ನೀನು ಸುಳ್ಳಾಣೆಯಿಡಬಾರದು; * ವಿಮೋ 20:7; ಯಾಜ 19:12 ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.
|
35. ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; † ಕೀರ್ತ 48:2 ಅದು ಆ ಮಹಾ ರಾಜನ ಪಟ್ಟಣವಾಗಿದೆ.
|
37. ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ. PEPS
|
38. “ ‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.
|
39. ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
|
43. ‡ ಯಾಜ 19:17,18 “ ‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.
|
44. ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; § ಲೂಕ 3:34; ಅ. ಕೃ. 7:60 ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
|
45. ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
|
47. ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
|
48. * ಆದಿ 17:1; ಎಫೆ 5:1; ಯಾಕೋಬ. 1:4 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ. PE
|