1. {#1ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ [BR]ಲೂಕ 6:20-49; 11:1-4,9-13,33-36; 12:22-24,57-59; 16:17,18 } [PS]ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
2. ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, [PE]
3. [QS] [SCJ]“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.[SCJ.] [QE]
4. [QS] [SCJ]ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.[SCJ.] [QE]
5. [QS] [SCJ]ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.[SCJ.] [QE]
6. [QS] [SCJ]ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.[SCJ.] [QE]
7. [QS] [SCJ]ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.[SCJ.] [QE]
8. [QS] [* ಕೀರ್ತ 24:4; ಇಬ್ರಿ. 12:14; 1 ಯೋಹಾ 3:2-3: ][SCJ]ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.[SCJ.] [QE]
9. [QS] [SCJ]ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.[SCJ.] [QE]
10. [QS] [SCJ]ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.[SCJ.] [QE]
11. [PS] [SCJ]“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.[SCJ.]
12. [† ಅ. ಕೃ. 5:41; ರೋಮಾ. 5:3 ][SCJ]ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.[SCJ.] [PE]
13. [PS] [SCJ]“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.[SCJ.]
14. [‡ ಫಿಲಿ. 2:15 ][SCJ]ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.[SCJ.]
15. [SCJ]ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.[SCJ.]
16. [SCJ]ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.[SCJ.] [PE]
17. [PS] [SCJ]“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.[SCJ.]
18. [SCJ]ನಿಮಗೆ ಸತ್ಯವಾಗಿ ಹೇಳುತ್ತೇನೆ,[SCJ.][§ ಮತ್ತಾ 24:35; ಲೂಕ 16:17 ][SCJ]ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.[SCJ.]
19. [SCJ]ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.[SCJ.]
20. [SCJ]ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.[SCJ.] [PE]
21. [PS] [* ವಿಮೋ 20:13 ][SCJ]“ ‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.[SCJ.]
22. [SCJ]ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, [SCJ.][† ಮೂಲ: ಬೆಂಕಿಯ ಕುಂಡಕ್ಕೆ ][SCJ]ಅಗ್ನಿ ನರಕಕ್ಕೆ ಗುರಿಯಾಗುವನು.[SCJ.]
23. [SCJ]ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,[SCJ.]
24. [SCJ]ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.[SCJ.] [PE]
25. [PS] [SCJ]“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.[SCJ.]
26. [SCJ]ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.[SCJ.] [PE]
27. [PS] [‡ ವಿಮೋ 20:14 ][SCJ]“ ‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.[SCJ.]
28. [SCJ]ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.[SCJ.]
29. [SCJ]ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.[SCJ.]
30. [§ ಮತ್ತಾ 18:8; ಮಾರ್ಕ 9:43 ][SCJ]ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.[SCJ.]
31. [SCJ]ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.[SCJ.]
32. [SCJ]ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.[SCJ.] [PE]
33. [PS] [SCJ]“ಮತ್ತು, ನೀನು ಸುಳ್ಳಾಣೆಯಿಡಬಾರದು;[SCJ.][* ವಿಮೋ 20:7; ಯಾಜ 19:12 ][SCJ]‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.[SCJ.]
34. [SCJ]ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.[SCJ.]
35. [SCJ]ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ;[SCJ.][† ಕೀರ್ತ 48:2 ][SCJ]ಅದು ಆ ಮಹಾ ರಾಜನ ಪಟ್ಟಣವಾಗಿದೆ.[SCJ.]
36. [SCJ]ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.[SCJ.]
37. [SCJ]ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.[SCJ.] [PE]
38. [PS] [SCJ]“ ‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.[SCJ.]
39. [SCJ]ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.[SCJ.]
40. [SCJ]ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.[SCJ.]
41. [SCJ]ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.[SCJ.]
42. [SCJ]ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.[SCJ.] [PE]
43. [PS] [‡ ಯಾಜ 19:17,18 ][SCJ]“ ‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.[SCJ.]
44. [SCJ]ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;[SCJ.][§ ಲೂಕ 3:34; ಅ. ಕೃ. 7:60 ][SCJ]ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.[SCJ.]
45. [SCJ]ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.[SCJ.]
46. [SCJ]ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.[SCJ.]
47. [SCJ]ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.[SCJ.]
48. [* ಆದಿ 17:1; ಎಫೆ 5:1; ಯಾಕೋಬ. 1:4 ][SCJ]ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.[SCJ.] [PE]