1. {ದಾನಧರ್ಮದ ವಿಧಾನ} PS “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ * ಆಶೀರ್ವಾದ ಫಲದೊರೆಯುವುದಿಲ್ಲ. PEPS
|
2. “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
5. {ಪ್ರಾರ್ಥನೆಯ ವಿಧಾನ} PS “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
6. ನೀನು ಪ್ರಾರ್ಥನೆಮಾಡುವಾಗ ‡ 2 ಅರಸು 4:33; ದಾನಿ 6:10 ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
|
7. ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.
|
8. ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.
|
10. “ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. |
12. § ನಮ್ಮ ಸಾಲಗಾರರನ್ನು ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ
ನಮ್ಮ * ಸಾಲಗಳನ್ನು ತಪ್ಪುಗಳನ್ನು ಕ್ಷಮಿಸು. |
13. ನಮ್ಮನ್ನು ಶೋಧನೆಯೊಳಗೆ ಸೇರಿಸದೆ
ಕೆಡುಕನಿಂದ; ನಮ್ಮನ್ನು ತಪ್ಪಿಸು † ಕೆಲವು ಪತ್ರಿಕೆಗಳಲ್ಲಿ: ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮವೇ. ಆಮೆನ್; 1ಪೂರ್ವ 29:11 |
16. “ಇದಲ್ಲದೆ ‡ ಯೆಶಾ 58:5 ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
|
18. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು. PS
|
19. {ಶಾಶ್ವತ ಸಂಪತ್ತು} PS § ಲೂಕ 12:33; 1 ತಿಮೊ 6:17-19; ರೋಮಾ 9:13 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
|
20. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
|
22. “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.
|
23. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು! PEPS
|
24. “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು * ಅಲಕ್ಷ್ಯಮಾಡಿ ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ. PS
|
25. {ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ} PS “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
|
26. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
|
27. † ಲೂಕ 12:25-31 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ‡ ಆಯುಸ್ಸು ಹೆಚ್ಚು ಮಾಡಿಕೊಳ್ಳುವುದು ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?
|
28. ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
|
29. ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
|
30. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!
|
32. ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.
|
33. ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
|
34. ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು. PE
|