1. {#1ದಾನಧರ್ಮದ ವಿಧಾನ }
2. [PS] [SCJ]“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ[SCJ.][* ಆಶೀರ್ವಾದ ][SCJ]ಫಲದೊರೆಯುವುದಿಲ್ಲ.[SCJ.] [PE][PS] [SCJ]“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
3. [SCJ]ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.[SCJ.]
4. [† ಮತ್ತಾ 6:6,18 ][SCJ]ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.[SCJ.] [PE]
5. {#1ಪ್ರಾರ್ಥನೆಯ ವಿಧಾನ } [PS] [SCJ]“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
6. [SCJ]ನೀನು ಪ್ರಾರ್ಥನೆಮಾಡುವಾಗ[SCJ.][‡ 2 ಅರಸು 4:33; ದಾನಿ 6:10 ][SCJ]ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.[SCJ.]
7. [SCJ]ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.[SCJ.]
8. [SCJ]ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.[SCJ.]
9. [SCJ]ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,[SCJ.] [PE]
10. [QS] [SCJ]“ಪರಲೋಕದಲ್ಲಿರುವ ನಮ್ಮ ತಂದೆಯೇ,[SCJ.] [QE][QS2][SCJ]ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.[SCJ.] [QE][QS2][SCJ]ನಿನ್ನ ರಾಜ್ಯವು ಬರಲಿ.[SCJ.] [QE][QS2][SCJ]ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ[SCJ.] [QE][QS3][SCJ]ಭೂಲೋಕದಲ್ಲಿಯೂ ನೆರವೇರಲಿ.[SCJ.] [QE]
2. [QS2] [SCJ]ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.[SCJ.] [QE]
2. [QS2] [§ ನಮ್ಮ ಸಾಲಗಾರರನ್ನು ][SCJ]ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ[SCJ.] [QE][QS3][SCJ]ನಮ್ಮ[SCJ.] [* ಸಾಲಗಳನ್ನು ][SCJ]ತಪ್ಪುಗಳನ್ನು ಕ್ಷಮಿಸು.[SCJ.] [QE]
2. [QS2] [SCJ]ನಮ್ಮನ್ನು ಶೋಧನೆಯೊಳಗೆ ಸೇರಿಸದೆ[SCJ.] [QE][QS3][SCJ]ಕೆಡುಕನಿಂದ; ನಮ್ಮನ್ನು ತಪ್ಪಿಸು[SCJ.][† ಕೆಲವು ಪತ್ರಿಕೆಗಳಲ್ಲಿ: ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮವೇ. ಆಮೆನ್; 1ಪೂರ್ವ 29:11 ] [QE]
14. [MS] [SCJ]ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.[SCJ.]
15. [SCJ]ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.[SCJ.] [ME]
16. [PS] [SCJ]“ಇದಲ್ಲದೆ[SCJ.][‡ ಯೆಶಾ 58:5 ][SCJ]ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.[SCJ.]
17. [SCJ]ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.[SCJ.]
18. [SCJ]ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.[SCJ.] [PE]
19. {#1ಶಾಶ್ವತ ಸಂಪತ್ತು } [PS] [§ ಲೂಕ 12:33; 1 ತಿಮೊ 6:17-19; ರೋಮಾ 9:13 ][SCJ]“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.[SCJ.]
20. [SCJ]ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,[SCJ.]
21. [SCJ]ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.[SCJ.] [PE]
22. [PS] [SCJ]“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.[SCJ.]
23. [SCJ]ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು![SCJ.] [PE]
24.
25. [PS] [SCJ]“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು[SCJ.][* ಅಲಕ್ಷ್ಯಮಾಡಿ ][SCJ]ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.[SCJ.] [PE]{#1ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ } [PS] [SCJ]“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.[SCJ.]
26. [SCJ]ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?[SCJ.]
27. [† ಲೂಕ 12:25-31 ][SCJ]ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ[SCJ.] [‡ ಆಯುಸ್ಸು ಹೆಚ್ಚು ಮಾಡಿಕೊಳ್ಳುವುದು ][SCJ]ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?[SCJ.]
28. [SCJ]ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;[SCJ.]
29. [SCJ]ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.[SCJ.]
30. [SCJ]ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ![SCJ.]
31. [SCJ]ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.[SCJ.]
32. [SCJ]ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.[SCJ.]
33. [SCJ]ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.[SCJ.]
34. [SCJ]ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.[SCJ.] [PE]