4. ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
|
5. ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು. PEPS
|
6. “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. PS
|
7. {ಫಲದಾಯಕ ಪ್ರಾರ್ಥನೆ} PS “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
|
8. ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. PEPS
|
11. ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
|
12. ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. PS
|
13. {ವಿನಾಶದ ಬಾಗಿಲು ವಿಶಾಲ} PS * ಲೂಕ 13:24. “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
|
15. {ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ} PS “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
|
16. † ಲೂಕ 6:43, 44. ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
|
17. ಹಾಗೆಯೇ ‡ ಮತ್ತಾ 12:33-35. ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
|
21. {ಕಪಟಿಗಳಿಗೆ ದೊರೆಯುವ ತೀರ್ಪು} PS § ಲೂಕ 6:46-49; ಯಾಕೋಬ 1:22. “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
|
22. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
|
23. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು. PS
|
24. {ಸ್ಥಿರವಾದ ಮನೆ} PS “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
|
25. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
|
26. ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.
|
27. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು. PEPS
|