1. {ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು} (ಮಾರ್ಕ 1:40-44; ಲೂಕ 5:12-14) PS “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
|
2. ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
|
4. ಆಗ ಯೇಸು ಅವನಿಗೆ; * ಮತ್ತಾ 9:30 “ನೋಡು, ಯಾರಿಗೂ ಹೇಳಬೇಡ; † ಯಾಜ 14:2-32; ಲೂಕ 17:14 ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ‡ ಯಾಜಕರಿಗೆ ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು. ಲೂಕ 7:1-10,13,28,29 PEPS
|
5. {ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು} PS ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ § ನೂರು ಸಿಪಾಯಿಗಳ ಮೇಲಿರುವ ಸರದಾರ ಶತಾಧಿಪತಿಯು ಆತನ ಬಳಿಗೆ ಬಂದು,
|
6. “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.
|
8. ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
|
9. ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.
|
10. ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
|
11. ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
|
12. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.
|
13. ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು. PS
|
14. {ಯೇಸುವಿನ ರೋಗನಿವಾರಕ ಕಾರ್ಯ} (ಮಾರ್ಕ 1:29-34; ಲೂಕ 4:38-41) PS ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
|
16. ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
|
17. ಇದರಿಂದ * ಯೆಶಾ 53:4 “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು. PS
|
18. {ಶಿಷ್ಯರಾಗಬೇಕೆಂದಿರುವವರಿಗೆ ಬೆಲೆಕೊಡುವುದು ಅವಶ್ಯವೆಂದು ಯೇಸು ಬೋಧಿಸಿದ್ದು} (ಲೂಕ 9:57-60) PS ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.
|
19. ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
|
20. ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
|
21. ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ † ಯೆಹೂದ್ಯರ ಪದ್ಧತಿಯಂತೆ ಸತ್ತವರನ್ನು ಅದೇ ದಿನ ಹೂಳಬೇಕು; ಆದರೆ ಇಲ್ಲಿ ಈ ಶಿಷ್ಯನು ಯೇಸುವನ್ನು ತನ್ನ ತಂದೆ ತಾಯಿ ಸಾಯುವ ತನಕ ಅವರ ಸೇವೆಮಾಡಿ ಬರುವುದಾಗಿ ಹೇಳುತ್ತಿದ್ದನು. ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
|
22. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು. PS
|
23. {ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು} (ಮಾರ್ಕ 4:35-41; ಲೂಕ 8:22-25) PS ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
|
24. ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
|
26. ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
|
28. {ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು} (ಮಾರ್ಕ 5:1-20; ಲೂಕ 8:26-39) PS ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.
|
29. ಅವರು, ‡ ಮತ್ತಾ 14:33; 16:16 “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.
|
31. ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು.
|
32. ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
|
34. ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. PE
|