1.
2. [PS]ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ. [PE]{#1ಸಮಾರ್ಯಕ್ಕೂ ಯೆರೂಸಲೇಮಿಗೂ ಸಂಭವಿಸುವ ನಾಶನ } [QS]ಜನಾಂಗಗಳೇ, ನೀವೆಲ್ಲರೂ ಕೇಳಿರಿ. [QE][QS]ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, [QE][QS]ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ. [QE]
3. [QS]ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. [QE][QS]ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ. [QE]
4. [QS]ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ [QE][QS]ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ. [QE]
5. [QS]ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. [QE][QS]ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! [QE][QS]ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? [QE][QS]ಯೆರೂಸಲೇಮಲ್ಲವೇ! [QE]
6. [QS]ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, [QE][QS]ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. [QE][QS]ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. [QE][QS]ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು. [QE]
7. [QS]ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. [QE][QS]ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. [QE][QS]ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. [QE][QS]ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ [QE][QS]ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು. [QE]
8. {#1ಗೋಳಾಟ } [QS]ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, [QE][QS]ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. [QE][QS]ನರಿಗಳಂತೆ ಅರಚಿಕೊಳ್ಳುವೆನು. [QE][QS]ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು. [QE]
9. [QS]ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. [QE][QS]ಅದು ಯೆಹೂದಕ್ಕೂ ತಾಕಿದೆ. [QE][QS]ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ. [QE]
10. [QS]ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, [QE][QS]ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ. [QE]
11. [QS]ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. [QE][QS]ಚಾನಾನಿನವರು ಹೊರಡರು. [QE][QS]ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು. [QE]
12. [QS]ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ [QE][QS]ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ [QE][QS]ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ. [QE]
13. [QS]ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. [QE][QS]ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, [QE][QS]ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು. [QE]
14. [QS]ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. [QE][QS]ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು. [QE]
15. [QS]ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. [QE][QS]ಇಸ್ರಾಯೇಲಿನ ನಾಯಕರು[* ನಾಯಕರು ಅಥವಾ ಮಹಿಮೆಯು ] ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು. [QE]
16. [QS]ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. [QE][QS]ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ. [QE]