1. {ಇಸ್ರಾಯೇಲಿನ ಮುಖಂಡರ ಖಂಡನೆ} PS ನಾನು ಹೀಗೆ ಸಾರಿದೆನು;
“ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ? |
2. ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ.
ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ. |
3. ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ.
ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ * ಕೊಪ್ಪರಿಗೆಯಲ್ಲಿನ ದೊಡ್ಡ ಕಡಾಯಿ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ. |
4. ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು.
ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.” |
5. ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ,
ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ, |
6. “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು,
ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು. |
7. ದಿವ್ಯದರ್ಶಿಗಳು ಆಶಾಭಂಗಪಡುವರು,
ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ. |
8. ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ,
ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ. |
9. ನ್ಯಾಯಕ್ಕೆ ಅಸಹ್ಯಪಟ್ಟು,
ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ, |
11. ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ.
ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ. |
12. ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು,
ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು. PE |