1. {#1ಚೀಯೋನಿನ ಮುಂದಿನ ಪ್ರಖ್ಯಾತಿ } [QS]ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು [QE][QS]ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. [QE][QS]ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು. [QE]
2. [QS]ಹೊರಟುಬಂದ ಬಹು ದೇಶಗಳವರು, [QE][QS]“ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, [QE][QS]ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, [QE][QS]ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. [QE][QS]ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು. [QE]
3. [QS]ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, [QE][QS]ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. [QE][QS]ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, [QE][QS]ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. [QE][QS]ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. [QE][QS]ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ. [QE]
4. [QS]ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. [QE][QS]ಅವರನ್ನು ಯಾರೂ ಹೆದರಿಸರು. [QE][QS]ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ. [QE]
5. [QS]ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. [QE][QS]ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು. [QE]
6. {#1ಇಸ್ರಾಯೇಲರು ಸೆರೆವಾಸದಿಂದ ಹಿಂದಿರುಗುವರು } [QS]ಯೆಹೋವನು ಇಂತೆನ್ನುತ್ತಾನೆ, [QE][QS]“ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, [QE][QS]ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು. [QE]
7. [QS]ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, [QE][QS]ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, [QE][QS]ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು. [QE]
8. [QS]ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, [QE][QS]ಚೀಯೋನ್ ಯುವತಿಯ ಸುಭದ್ರ ಕೋಟೆಯೇ, [QE][QS]ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. [QE][QS]ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು. [QE]
9. {#1ಚೀಯೋನಿನ ಇಂದಿನ ಇಕ್ಕಟ್ಟು ಮುಂದಿನ ಜಯ } [QS]ನೀನೀಗ ರೋದಿಸುತ್ತಿರುವುದೇಕೆ? [QE][QS]ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? [QE][QS]ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ? [QE]
10. [QS]ಚೀಯೋನ್ ಯುವತಿಯೇ, [QE][QS]ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. [QE][QS]ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. [QE][QS]ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು. [QE]
11. [QS]‘ಯೆರೂಸಲೇಮ್ ಹೊಲಸಾಗಿ ಹೋಗಲಿ. [QE][QS]ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’ ” [QE][QS]ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ. [QE]
12. [QS]ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, [QE][QS]ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, [QE][QS]ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ. [QE]
13. [QS]ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, [QE][QS]ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, [QE][QS]ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. [QE][QS]ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, [QE][QS]ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. [QE][QS]ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ. [QE]