1. {ಇಸ್ರಾಯೇಲನ್ನು ರಕ್ಷಿಸುವ ರಾಜ} PS ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು.
ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು. |
2. ಎಫ್ರಾತದ ಬೇತ್ಲೆಹೇಮೇ,
ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. |
3. ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ
ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು |
4. ಆತನು ಯೆಹೋವನ ಬಲವನ್ನೂ,
ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು. ಬಿಡುಗಡೆ - ವಿನಾಶ |
5. ಆತನೇ ನಮಗೆ ಸಮಾಧಾನಪ್ರದನು.
ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು. |
6. ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು.
ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು. |
7. ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು
ಬೆಳೆಯಿಸುವ ಹದಮಳೆಗಳೂ ಹೇಗೆ ಮಾನವರ ಪ್ರಯತ್ನವಿಲ್ಲದೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು. |
8. ಇದಲ್ಲದೆ ಸಿಂಹವು ಕಾಡುಮೃಗಗಳನ್ನು,
ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು. |
10. {ಭಂಗವಾದ ಇಸ್ರಾಯೇಲಿನ ಮೂಢಭರವಸೆ} PS ಯೆಹೋವನು ಇಂತೆನ್ನುತ್ತಾನೆ,
“ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು. |
13. ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು.
ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ. |
14. ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು,
ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು. |