1. {#1ಇಸ್ರಾಯೇಲನ್ನು ರಕ್ಷಿಸುವ ರಾಜ } [QS]ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. [QE][QS]ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. [QE][QS]ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು. [QE]
2. [QS]ಎಫ್ರಾತದ ಬೇತ್ಲೆಹೇಮೇ, [QE][QS]ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ [QE][QS]ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. [QE][QS]ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. [QE]
3. [QS]ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ [QE][QS]ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. [QE][QS]ಅನಂತರ ಆ ಮಗನ ಸಹೋದರರಲ್ಲಿ ಉಳಿದವರು [QE][QS]ಇಸ್ರಾಯೇಲರೊಂದಿಗೆ ಹಿಂದಿರುಗುವರು [QE]
4. [QS]ಆತನು ಯೆಹೋವನ ಬಲವನ್ನೂ, [QE][QS]ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ [QE][QS]ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. [QE][QS]ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. [QE][QS]ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು. [QE]
5. {#1ಬಿಡುಗಡೆ - ವಿನಾಶ } [QS]ಆತನೇ ನಮಗೆ ಸಮಾಧಾನಪ್ರದನು. [QE][QS]ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, [QE][QS]ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, [QE][QS]ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು. [QE]
6. [QS]ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. [QE][QS]ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. [QE][QS]ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, [QE][QS]ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು [QE][QS]ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು. [QE]
7. [QS]ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು [QE][QS]ಬೆಳೆಯಿಸುವ ಹದಮಳೆಗಳೂ ಹೇಗೆ ಮಾನವರ ಪ್ರಯತ್ನವಿಲ್ಲದೆ ಸಮೃದ್ಧಿಯಾಗಿ ಬೆಳೆಯುವವು, [QE][QS]ಮಾನವರ ನೆರವನ್ನು ನಿರೀಕ್ಷಿಸದೆ ಹಿತಕರವಾಗಿರುವವೋ, [QE][QS]ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು. [QE]
8. [QS]ಇದಲ್ಲದೆ ಸಿಂಹವು ಕಾಡುಮೃಗಗಳನ್ನು, [QE][QS]ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, [QE][QS]ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, [QE][QS]ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು. [QE]
9. [QS]ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. [QE][QS]ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ. [QE]
10. {#1ಭಂಗವಾದ ಇಸ್ರಾಯೇಲಿನ ಮೂಢಭರವಸೆ } [PS]ಯೆಹೋವನು ಇಂತೆನ್ನುತ್ತಾನೆ, [PE][QS]“ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. [QE][QS]ನಿನ್ನ ರಥಗಳನ್ನು ನಾಶಗೊಳಿಸುವೆನು. [QE]
11. [QS]ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, [QE][QS]ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು. [QE]
12. [QS]ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. [QE][QS]ನಿನ್ನಲ್ಲಿ ಕಣಿಯವರು ಇರುವುದಿಲ್ಲ. [QE]
13. [QS]ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. [QE][QS]ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ. [QE]
14. [QS]ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, [QE][QS]ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು. [QE]
15. [QS]ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.” [QE]